ಮಹಾಮಾನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ 162 ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಆಯೋಜಿಸಲಾಗುವ ಕಾರ್ಯಕ್ರಮ
11 ಸಂಪುಟಗಳ ಮೊದಲ ಸರಣಿ ಬಿಡುಗಡೆಯಾಗಲಿದೆ

ಮಹಾಮಾನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ 162 ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಸಂಗ್ರಹಿತ ಕೃತಿಗಳ' 11 ಸಂಪುಟಗಳ ಮೊದಲ ಸರಣಿಯನ್ನು 2023 ರ ಡಿಸೆಂಬರ್ 25 ರಂದು ಸಂಜೆ 4:30 ಕ್ಕೆ ವಿಜ್ಞಾನ ಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ರಾಷ್ಟ್ರದ ಸೇವೆಗೆ ಅಪಾರ ಕೊಡುಗೆ ನೀಡಿದ ಸ್ವಾತಂತ್ರ್ಯ ಹೋರಾಟಗಾರರಿಗೆ ಅಮೃತ್ ಕಾಲದಲ್ಲಿ, ಸೂಕ್ತ ಮಾನ್ಯತೆ ನೀಡಬೇಕು ಎನ್ನುವುದು ಪ್ರಧಾನ ಮಂತ್ರಿಯವರ ಚಿಂತನೆಯಾಗಿದೆ. 'ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಸಂಗ್ರಹಿತ ಕೃತಿಗಳು' ಈ ದಿಕ್ಕಿನಲ್ಲಿ ಒಂದು ಪ್ರಯತ್ನವಾಗಿದೆ.

11 ಸಂಪುಟಗಳಲ್ಲಿ ಸುಮಾರು 4,000 ಪುಟಗಳಲ್ಲಿ ವಿಸ್ತಾರವಾಗಿ ಹರಡಿರುವ ದ್ವಿಭಾಷಾ (ಇಂಗ್ಲಿಷ್ ಮತ್ತು ಹಿಂದಿ) ಕೃತಿಯು ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಬರಹಗಳು ಮತ್ತು ಭಾಷಣಗಳ ಸಂಗ್ರಹವಾಗಿದೆ, ಇವುಗಳನ್ನು ದೇಶದ ಮೂಲೆ ಮೂಲೆಗಳಿಂದ ಸಂಗ್ರಹಿಸಲಾಗಿದೆ. ಈ ಸಂಪುಟಗಳು ಜ್ಞಾಪಕ ಪತ್ರಗಳು/ಮನವಿಗಳು ಸೇರಿದಂತೆ ಅವರ ಅಪ್ರಕಟಿತ ಪತ್ರಗಳು, ಲೇಖನಗಳು ಮತ್ತು ಭಾಷಣಗಳನ್ನು ಒಳಗೊಂಡಿವೆ; 1907ರಲ್ಲಿ ಅವರು ಪ್ರಾರಂಭಿಸಿದ ಹಿಂದಿ ವಾರಪತ್ರಿಕೆ 'ಅಭ್ಯುದಯ'ದ ಸಂಪಾದಕೀಯ ವಿಷಯಗಳು; ಅವರು ಕಾಲಕಾಲಕ್ಕೆ ಬರೆದ ಲೇಖನಗಳು, ಕರಪತ್ರಗಳು ಮತ್ತು ಕಿರುಪುಸ್ತಕಗಳು; 1903 ಮತ್ತು 1910 ರ ನಡುವೆ ಆಗ್ರಾ ಮತ್ತು ಅವಧ್ ಸಂಯುಕ್ತ ಪ್ರಾಂತ್ಯಗಳ ವಿಧಾನ ಪರಿಷತ್ತಿನಲ್ಲಿ ಮಾಡಿದ ಎಲ್ಲಾ ಭಾಷಣಗಳು; ರಾಯಲ್ ಕಮಿಷನ್ ಮುಂದೆ ನೀಡಿದ ಹೇಳಿಕೆಗಳು; 1910 ಮತ್ತು 1920 ರ ನಡುವೆ ಇಂಪೀರಿಯಲ್ ಲೆಜಿಸ್ಲೇಟಿವ್ ಕೌನ್ಸಿಲ್ನಲ್ಲಿ ಮಸೂದೆಗಳನ್ನು ಮಂಡಿಸುವಾಗ ಮಾಡಿದ ಭಾಷಣಗಳು; ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಸ್ಥಾಪನೆಯ ಮೊದಲು ಮತ್ತು ನಂತರ ಬರೆದ ಪತ್ರಗಳು, ಲೇಖನಗಳು ಮತ್ತು ಭಾಷಣಗಳು; ಮತ್ತು 1923 ಮತ್ತು 1925 ರ ನಡುವೆ ಅವರು ಬರೆದ ಡೈರಿ. ಇದರಲ್ಲಿ ಸೇರಿದೆ. 

ಪಂಡಿತ್ ಮದನ್ ಮೋಹನ್ ಮಾಳವೀಯ ಅವರು ಬರೆದ ಮತ್ತು ಮಾತನಾಡಿದ ದಾಖಲೆಗಳನ್ನು ಸಂಶೋಧಿಸುವ ಮತ್ತು ಸಂಕಲಿಸುವ ಕೆಲಸವನ್ನು ಮಹಾಮಾನ ಮಾಳವೀಯ ಮಿಷನ್ ಕೈಗೆತ್ತಿಕೊಂಡಿತು, ಇದು ಮಹಾಮಾನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಆದರ್ಶಗಳು ಮತ್ತು ಮೌಲ್ಯಗಳನ್ನು ಪ್ರಚಾರ ಮಾಡಲು ಮೀಸಲಾಗಿರುವ ಸಂಸ್ಥೆಯಾಗಿದೆ.  ಖ್ಯಾತ ಪತ್ರಕರ್ತ ಶ್ರೀ ರಾಮ್ ಬಹದ್ದೂರ್ ರಾಯ್ ನೇತೃತ್ವದ ಮಿಷನ್ ನ ಕಟಿಬದ್ಧ ತಂಡವು ಭಾಷೆ ಮತ್ತು ಪಠ್ಯವನ್ನು ಬದಲಾಯಿಸದೆ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಮೂಲ ಸಾಹಿತ್ಯದ ಮೇಲೆ ಕೆಲಸ ಮಾಡಿದೆ. ಈ ಪುಸ್ತಕಗಳ ಪ್ರಕಟಣೆಯನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ ಬರುವ ಪ್ರಕಾಶನ ವಿಭಾಗವು ಮಾಡಿದೆ.

ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಪ್ರಖ್ಯಾತ ಸ್ಥಾಪಕ ಪಂಡಿತ್ ಮದನ್ ಮೋಹನ್ ಮಾಳವೀಯ ಅವರು ಆಧುನಿಕ ಭಾರತದ ನಿರ್ಮಾತೃಗಳಲ್ಲಿ ಪ್ರಮುಖ ಸ್ಥಾನವನ್ನು ಪಡೆದಿದ್ದಾರೆ. ಜನರಲ್ಲಿ ರಾಷ್ಟ್ರೀಯ ಪ್ರಜ್ಞೆಯನ್ನು ಹೆಚ್ಚಿಸಲು ಅಪಾರವಾಗಿ ಕೆಲಸ ಮಾಡಿದ ಅತ್ಯುತ್ತಮ ವಿದ್ವಾಂಸ ಮತ್ತು ಸ್ವಾತಂತ್ರ್ಯ ಹೋರಾಟಗಾರರಾಗಿ ಅವರನ್ನು ಸ್ಮರಿಸಲಾಗುತ್ತದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
How NPS transformed in 2025: 80% withdrawals, 100% equity, and everything else that made it a future ready retirement planning tool

Media Coverage

How NPS transformed in 2025: 80% withdrawals, 100% equity, and everything else that made it a future ready retirement planning tool
NM on the go

Nm on the go

Always be the first to hear from the PM. Get the App Now!
...
PM Modi extends greetings to Sashastra Seema Bal personnel on Raising Day
December 20, 2025

The Prime Minister, Narendra Modi, has extended his greetings to all personnel associated with the Sashastra Seema Bal on their Raising Day.

The Prime Minister said that the SSB’s unwavering dedication reflects the highest traditions of service and that their sense of duty remains a strong pillar of the nation’s safety. He noted that from challenging terrains to demanding operational conditions, the SSB stands ever vigilant.

The Prime Minister wrote on X;

“On the Raising Day of the Sashastra Seema Bal, I extend my greetings to all personnel associated with this force. SSB’s unwavering dedication reflects the highest traditions of service. Their sense of duty remains a strong pillar of our nation’s safety. From challenging terrains to demanding operational conditions, the SSB stands ever vigilant. Wishing them the very best in their endeavours ahead.

@SSB_INDIA”