ಜೈನಾಚಾರ್ಯ ಶ್ರೀ ವಿಜಯ ವಲ್ಲಭ ಸುರೀಶ್ವರ್ ಜಿ ಮಹಾರಾಜ್ ಅವರ 151 ನೇ ಜಯಂತಿಯ ಅಂಗವಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 16, 2020 ರಂದು ಮಧ್ಯಾಹ್ನ 12.30 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ‘ಶಾಂತಿ ಪ್ರತಿಮೆ’ ಅನಾವರಣಗೊಳಿಸಲಿದ್ದಾರೆ.

ಶ್ರೀ ವಿಜಯ ವಲ್ಲಭ ಸುರೀಶ್ವರ್ ಜಿ ಮಹಾರಾಜ್ (1870-1954) ಜೈನ ಮುನಿಯಾಗಿ ಕಠಿಣ ಜೀವನವನ್ನು ನಡೆಸಿದರು. ಅವರು ಜನಸಾಮಾನ್ಯರ ಕಲ್ಯಾಣ, ಶಿಕ್ಷಣ ನೀಡುವುದು ಹಾಗೂ ಸಾಮಾಜಿಕ ದುಷ್ಕೃತ್ಯಗಳ ನಿರ್ಮೂಲನೆಗಾಗಿ ಸತತವಾಗಿ ಕೆಲಸ ಮಾಡಿದರು. ಅವರು ಕವನ, ಪ್ರಬಂಧಗಳು, ಭಕ್ತಿಗೀತೆಗಳು ಮತ್ತು ಸ್ತವನಗಳು ಸೇರಿದಂತೆ ಅನೇಕ ಸಾಹಿತ್ಯವನ್ನೂ ರಚಿಸಿದ್ದಾರೆ. ಸ್ವಾತಂತ್ರ್ಯ ಚಳುವಳಿ ಮತ್ತು ಸ್ವದೇಶಿ ಆಂದೋಲನಕ್ಕೆ ಅವರು ಸಕ್ರಿಯ ಬೆಂಬಲ ನೀಡಿದ್ದರು. ಅವರ ಪ್ರೇರಣೆಯಿಂದಾಗಿ, ಶಾಲಾ ಕಾಲೇಜುಗಳು ಮತ್ತು ಅಧ್ಯಯನ ಕೇಂದ್ರಗಳು ಸೇರಿದಂತೆ 50 ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು ಹಲವಾರು ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಅವರ ಗೌರವಾರ್ಥವಾಗಿ ಅನಾವರಣಗೊಳಿಸುವ ಪ್ರತಿಮೆಗೆ ‘ಶಾಂತಿ ಪ್ರತಿಮೆ’ ಎಂದು ಹೆಸರಿಸಲಾಗಿದೆ. 151 ಇಂಚು ಎತ್ತರದ ಪ್ರತಿಮೆಯನ್ನು ಅಷ್ಟಾಧಾತು ಅಂದರೆ ಅಷ್ಟಲೋಹಗಳಿಂದ ತಯಾರಿಸಲಾಗಿದ್ದು, ತಾಮ್ರವನ್ನು ಪ್ರಮುಖವಾಗಿ ಬಳಸಲಾಗಿದೆ. ರಾಜಸ್ಥಾನದ ಪಾಲಿಯ ಜೆತ್ಪುರದಲ್ಲಿರುವ ವಿಜಯ ವಲ್ಲಭ ಸಾಧನಾ ಕೇಂದ್ರದಲ್ಲಿ ಈ ಪ್ರತಿಮೆಯನ್ನು ಸ್ಥಾಪಿಸಲಾಗುತ್ತಿದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PM Modi Praises Farmers For Taking India's Rich Mango Heritage To Global Markets

Media Coverage

PM Modi Praises Farmers For Taking India's Rich Mango Heritage To Global Markets
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 1 ಜೂನ್ 2026
June 01, 2026

Self-Reliant India Rising: Healthcare, Ports, Railways & More Under PM Modi