ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಲ್ಲಿ ಐದು ʻವಂದೇ ಭಾರತ್ ಎಕ್ಸ್‌ಪ್ರೆಸ್ʼ ರೈಲುಗಳಿಗೆ ಹಸಿರು ನಿಶಾನೆ ತೋರಲಿರುವ ಪ್ರಧಾನಿ
ಭೋಪಾಲ್‌ (ರಾಣಿ ಕಮಲಾಪತಿ)-ಇಂದೋರ್‌, ಭೋಪಾಲ್‌ (ರಾಣಿ ಕಮಲಾಪತಿ)-ಜಬಲ್‌ಪುರ, ರಾಂಚಿ-ಪಾಟ್ನಾ, ಧಾರವಾಡ-ಬೆಂಗಳೂರು ಮತ್ತು ಗೋವಾ(ಮಡಗಾಂವ್‌)-ಮುಂಬೈ ನಡುವೆ ʻವಂದೇ ಭಾರತ್‌ ಎಕ್ಸ್‌ಪ್ರೆಸ್‌ʼ ರೈಲು ಪರಿಚಯಿಸಲಾಗುವುದು
ಗೋವಾ, ಬಿಹಾರ ಮತ್ತು ಜಾರ್ಖಂಡ್‌ಗೆ ಮೊದಲ ಬಾರಿಗೆ ʻವಂದೇ ಭಾರತ್ʼ ರೈಲು ಸಂಪರ್ಕ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಜೂನ್ 27ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಜೂನ್ 27ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.

ಬೆಳಗ್ಗೆ 10:30ಕ್ಕೆ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣಕ್ಕೆ ತಲುಪಲಿರುವ ಪ್ರಧಾನಿ, ಐದು `ವಂದೇ ಭಾರತ್’ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಆ ಐದು ʻವಂದೇ ಭಾರತ್ʼ ರೈಲುಗಳೆಂದರೆ: ʻಭೋಪಾಲ್‌(ರಾಣಿ ಕಮಲಾಪತಿ)-ಇಂದೋರ್‌ ವಂದೇ ಭಾರತ್‌ ಎಕ್ಸ್‌ಪ್ರೆಸ್‌ʼ; ʻಭೋಪಾಲ್‌-ಜಬಲ್‌ಪುರ ವಂದೇ ಭಾರತ್ ಎಕ್ಸ್‌ಪ್ರೆಸ್‌ʼ; ʻರಾಂಚಿ-ಪಾಟ್ನಾ ವಂದೇ ಭಾರತ್ ಎಕ್ಸ್‌ಪ್ರೆಸ್‌ʼ; ʻಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ʼ; ಮತ್ತು ʻಮಡಗಾಂವ್ (ಗೋವಾ) - ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ʼ.

ʻಭೋಪಾಲ್‌(ರಾಣಿ ಕಮಲಾಪತಿ)-ಇಂದೋರ್‌ ವಂದೇ ಭಾರತ್‌ ಎಕ್ಸ್‌ಪ್ರೆಸ್‌ʼ ರೈಲು ಮಧ್ಯ ಪ್ರದೇಶದ ಪ್ರಮುಖ ನಗರಗಳ ನಡುವೆ ಸುಗಮ ಮತ್ತು ವೇಗದ ಪ್ರಯಾಣಕ್ಕೆ ಅನುವು ಮಾಡುತ್ತದೆ. ಜೊತೆಗೆ ಈ ಭಾಗದ ಸಾಂಸ್ಕೃತಿ, ಧಾರ್ಮಿಕ ಮತ್ತು ಪ್ರವಾಸಿ ತಾಣಗಳ ನಡುವೆ ಸಂಪರ್ಕವನ್ನು ಹೆಚ್ಚಿಸುತ್ತದೆ.

ʻಭೋಪಾಲ್‌-ಜಬಲ್‌ಪುರ ವಂದೇ ಭಾರತ್ ಎಕ್ಸ್‌ಪ್ರೆಸ್‌ʼ ರೈಲು ಮಹಾಕೌಶಲ್ ಪ್ರದೇಶವನ್ನು (ಜಬಲ್‌ಪುರ) ಮಧ್ಯಪ್ರದೇಶದ ಕೇಂದ್ರಭಾಗಕ್ಕೆ(ಭೋಪಾಲ್) ಸಂಪರ್ಕಿಸುತ್ತದೆ. ಅಲ್ಲದೆ, ಈ ಭಾಗದ ಪ್ರವಾಸಿ ಸ್ಥಳಗಳು ಸುಧಾರಿತ ಸಂಪರ್ಕದಿಂದ ಪ್ರಯೋಜನ ಪಡೆಯಲಿವೆ.

ʻರಾಂಚಿ-ಪಾಟ್ನಾ ವಂದೇ ಭಾರತ್ ಎಕ್ಸ್‌ಪ್ರೆಸ್ʼ - ಇದು ಜಾರ್ಖಂಡ್ ಮತ್ತು ಬಿಹಾರಕ್ಕೆ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ʼರೈಲಾಲಿದೆ. ಪಾಟ್ನಾ ಮತ್ತು ರಾಂಚಿ ನಡುವಿನ ಸಂಪರ್ಕವನ್ನು ಹೆಚ್ಚಿಸುವ ಈ ರೈಲು ಪ್ರವಾಸಿಗರು, ವಿದ್ಯಾರ್ಥಿಗಳು ಮತ್ತು ಉದ್ಯಮಿಗಳಿಗೆ ವರದಾನವಾಗಲಿದೆ.

ʻಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ʼಕರ್ನಾಟಕದ ಪ್ರಮುಖ ನಗರಗಳಾದ ಧಾರವಾಡ, ಹುಬ್ಬಳ್ಳಿ ಮತ್ತು ದಾವಣಗೆರೆಯನ್ನು ರಾಜ್ಯದ ರಾಜಧಾನಿ ಬೆಂಗಳೂರಿನೊಂದಿಗೆ ಸಂಪರ್ಕಿಸುತ್ತದೆ. ಇದು ಈ ಪ್ರದೇಶದ ಪ್ರವಾಸಿಗರು, ವಿದ್ಯಾರ್ಥಿಗಳು, ಕೈಗಾರಿಕೋದ್ಯಮಿಗಳು ಮುಂತಾದವರಿಗೆಅಪಾರ ಪ್ರಯೋಜನವನ್ನು ನೀಡುತ್ತದೆ.

ʻಮಡಗಾಂವ್ (ಗೋವಾ) -ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್‌ʼ- ಇದು ಗೋವಾದ ಮೊದಲ ʻವಂದೇ ಭಾರತ್ ಎಕ್ಸ್‌ಪ್ರೆಸ್ʼರೈಲಾಗಿದೆ. ಇದು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಮತ್ತು ಗೋವಾದ ಮಡಗಾಂವ್ ನಿಲ್ದಾಣದ ನಡುವೆ ಚಲಿಸುತ್ತದೆ. ಇದು ಗೋವಾ ಮತ್ತು ಮಹಾರಾಷ್ಟ್ರ ಎರಡೂ ರಾಜ್ಯಗಳ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುತ್ತದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Best Never The Loudest': Bear Grylls Gives Shoutout To ‘Powerful Leader’ PM Modi

Media Coverage

'Best Never The Loudest': Bear Grylls Gives Shoutout To ‘Powerful Leader’ PM Modi
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 15 ಜುಲೈ 2026
July 15, 2026

Rooted in Tradition, Built for Tomorrow: PM Modi’s Blueprint for a Developed India