ಶ್ರೀ ಕಲ್ಕಿಧಾಮ ದೇವಾಲಯದ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನ ಮಂತ್ರಿ
ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ ಶೃಂಗಸಭೆ-2023ರ 4ನೇ ಸಮಾರಂಭದಲ್ಲಿ 10 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚಿನ ಮೌಲ್ಯದ 14,000 ಯೋಜನೆಗಳಿಗೆ ಪ್ರಧಾನಿ ಚಾಲನೆ

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ಫೆಬ್ರವರಿ 19ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.

ಬೆಳಗ್ಗೆ 10:30ರ ಸುಮಾರಿಗೆ ಪ್ರಧಾನ ಮಂತ್ರಿ ಅವರು ಸಂಭಾಲ್ ಜಿಲ್ಲೆಯ ಶ್ರೀ ಕಲ್ಕಿ ಧಾಮ್ ದೇವಾಲಯದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಪ್ರಧಾನ ಮಂತ್ರಿ ಅವರು ಶ್ರೀ ಕಲ್ಕಿಧಾಮ ದೇವಾಲಯ ಮಾದರಿ ಅನಾವರಣಗೊಳಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಅಧ್ಯಕ್ಷರಾಗಿರುವ ಶ್ರೀ ಕಲ್ಕಿ ಧಾಮ್ ನಿರ್ಮಾಣ್ ಟ್ರಸ್ಟ್ ವತಿಯಿಂದ ಶ್ರೀ ಕಲ್ಕಿ ಧಾಮ ನಿರ್ಮಿಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಹಲವಾರು ಸಂತರು, ಧಾರ್ಮಿಕ ಮುಖಂಡರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ.

2023 ಫೆಬ್ರವರಿಯಲ್ಲಿ ನಡೆದ ಉತ್ತರ ಪ್ರದೇಶ ಜಾಗತಿಕ ಹೂಡಿಕೆದಾರರ ಶೃಂಗಸಭೆ-2023 (ಯುಪಿಜಿಐಎಸ್ 2023) ಸಂದರ್ಭದಲ್ಲಿ ಸ್ವೀಕರಿಸಲಾದ ಹೂಡಿಕೆ ಪ್ರಸ್ತಾವನೆಗಳಿಗೆ ನಡೆಯುತ್ತಿರುವ 4ನೇ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರು ಮಧ್ಯಾಹ್ನ ಸುಮಾರು 1:45ಕ್ಕೆ ಉತ್ತರ ಪ್ರದೇಶದಾದ್ಯಂತ ಆರಂಭವಾಗುತ್ತಿರುವ 10 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚಿನ ಮೌಲ್ಯದ 14,000 ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಈ ಯೋಜನೆಗಳು ಉತ್ಪಾದನೆ, ನವೀಕರಿಸಬಹುದಾದ ಇಂಧನ, ಐಟಿ ಮತ್ತು ಐಟಿಇಎಸ್, ಆಹಾರ ಸಂಸ್ಕರಣೆ, ವಸತಿ ಮತ್ತು ರಿಯಲ್ ಎಸ್ಟೇಟ್, ಆತಿಥ್ಯ ಮತ್ತು ಮನರಂಜನೆ, ಶಿಕ್ಷಣ ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿವೆ. ಈ ಕಾರ್ಯಕ್ರಮದಲ್ಲಿ ಖ್ಯಾತ ಕೈಗಾರಿಕೋದ್ಯಮಿಗಳು, ಉನ್ನತ ಜಾಗತಿಕ ಮತ್ತು ಭಾರತೀಯ ಕಂಪನಿಗಳ ಪ್ರತಿನಿಧಿಗಳು, ರಾಯಭಾರಿಗಳು ಮತ್ತು ಹೈಕಮಿಷನರ್‌ಗಳು ಮತ್ತು ಇತರೆ ಗಣ್ಯ ಅತಿಥಿಗಳು ಸೇರಿದಂತೆ ಸುಮಾರು 5,000 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
‘Modi Govt’s 12 years are transformational for industry’

Media Coverage

‘Modi Govt’s 12 years are transformational for industry’
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 12 ಜೂನ್ 2026
June 12, 2026

Breaking Barriers, Building Bharat: PM Modi’s Historic Push for Gender Equality and Inclusive Growth