ಶೇರ್
 
Comments
PM takes stock of relief work underway across the state
PM Modi expresses solidarity with the people of Gujarat
PM announces financial assistance of Rs. 1,000 crore for immediate relief activities in the State
Union Government will deploy an Inter-Ministerial Team to visit the state to assess the extent of damage in the State
Centre assures all help for restoration and rebuilding of the infrastructure in the affected areas
PM also takes stock of COVID-19 situation in Gujarat
Rs. 2 lakh Ex gratia for the next of kin of the dead and Rs 50,000 for the injured due to Cyclone Tauktae would be given to all those affected across India
Immediate financial assistance would be given to all affected states after they send their assessments to the Centre

ತೌಕ್ತೇ ಚಂಡಮಾರುತದಿಂದ ಉದ್ಭವಿಸಿರುವ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿ ಇಂದು ಗುಜರಾತ್ ಗೆ ಭೇಟಿ ನೀಡಿದರು. ಗುಜರಾತ್ ಮತ್ತು ದಿಯುನಲ್ಲಿ ಉನಾ (ಗಿರ್ - ಸೋಮನಾಥ್), ಜಾಫ್ರಾಬಾದ್ (ಅಮ್ರೇಲಿ), ಮಾಹುವಾ (ಭಾವನಗರ) ದಲ್ಲಿ ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆಯನ್ನು ಪ್ರಧಾನಿ ನಡೆಸಿದರು.

ನಂತರ ಅವರು ಗುಜರಾತ್ ಮತ್ತು ದಿಯುನಲ್ಲಿ ಕೈಗೊಳ್ಳುತ್ತಿರುವ ಪರಿಹಾರ ಮತ್ತು ಪುನರ್ವಸತಿ ಕ್ರಮಗಳನ್ನು ಪರಿಶೀಲಿಸಲು ಅಹಮದಾಬಾದ್ ನಲ್ಲಿ ಸಭೆ ನಡೆಸಿದರು.

ಗುಜರಾತ್ ರಾಜ್ಯದಲ್ಲಿ ತಕ್ಷಣದ ಪರಿಹಾರ ಕಾರ್ಯಗಳಿಗಾಗಿ ಪ್ರಧಾನಿಯವರು 1,000 ಕೋಟಿ ರೂ. ಹಣಕಾಸು ನೆರವು ಘೋಷಿಸಿದರು. ರಾಜ್ಯದಲ್ಲಿ ಆಗಿರುವ ಹಾನಿಯ ಪ್ರಮಾಣವನ್ನು ತಿಳಿಯಲು ಕೇಂದ್ರ ಸರ್ಕಾರವು ಅಂತರ-ಮಂತ್ರಿ ತಂಡವನ್ನು ಕಳುಹಿಸುತ್ತದೆ. ನಿಯೋಜಿಸುತ್ತದೆ. ಅದರ ವರದಿಯ ಆಧಾರದ ಮೇಲೆ ಹೆಚ್ಚಿನ ನೆರವು ನೀಡಲಾಗುವುದು.

ಈ ಸಂಕಷ್ಟದ ಸಮಯದಲ್ಲಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತದೆ, ಸಂತ್ರಸ್ತ ಪ್ರದೇಶಗಳಲ್ಲಿನ ಮೂಲಸೌಕರ್ಯಗಳ ಪುನಃಸ್ಥಾಪನೆ ಮತ್ತು ಪುನರ್ನಿರ್ಮಾಣಕ್ಕೆ ಸಾಧ್ಯವಿರುವ ಎಲ್ಲ ನೆರವನ್ನು ನೀಡುತ್ತದೆ ಎಂದು ಪ್ರಧಾನಿ ರಾಜ್ಯದ ಜನರಿಗೆ ಭರವಸೆ ನೀಡಿದರು.

ಪ್ರಧಾನ ಮಂತ್ರಿಯವರು ತಮ್ಮ ಭೇಟಿಯ ಸಂದರ್ಭದಲ್ಲಿ ಕೋವಿಡ್ ಸಾಂಕ್ರಾಮಿಕದ ಪರಿಸ್ಥಿತಿಯ ಬಗ್ಗೆಯೂ ಮಾಹಿತಿ ಪಡೆದರು. ಕೈಗೊಂಡಿರುವ ಪ್ರತಿಕ್ರಿಯೆ ಕ್ರಮಗಳ ಬಗ್ಗೆ ರಾಜ್ಯ ಆಡಳಿತವು ಪ್ರಧಾನಮಂತ್ರಿಯವರಿಗೆ ಮಾಹಿತಿ ನೀಡಿತು. ಸಾಂಕ್ರಾಮಿಕವನ್ನು ತಡೆಗಟ್ಟುವ ಕ್ರಮಗಳನ್ನು ಖಚಿತಪಡಿಸಿಕೊಳ್ಳುಬೇಕಾದ  ಅಗತ್ಯವನ್ನು ಪ್ರಧಾನಿ ಒತ್ತಿ ಹೇಳಿದರು.

ಪ್ರಧಾನಿಯವರ ಗುಜರಾತ್ ಭೇಟಿಯ ಸಂದರ್ಭದಲ್ಲಿ ಅವರೊಂದಿಗೆ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಮತ್ತು ಇತರ ಅಧಿಕಾರಿಗಳು ಇದ್ದರು.

ಭಾರತದ ವಿವಿಧ ಭಾಗಗಳಲ್ಲಿ ಚಂಡಮಾರುತದಿಂದ ಸಂತ್ರಸ್ತರಾಗಿರುವ ಎಲ್ಲರಿಗೂ ಪ್ರಧಾನಿ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು ಮತ್ತು ವಿಪತ್ತಿನ ಸಮಯದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದರು.

ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ ಮತ್ತು ಕೇಂದ್ರಾಡಳಿತ ಪ್ರದೆಶಗಳಾದ ದಮನ್ ಮತ್ತು ದಿಯು ಮತ್ತು ದಾದ್ರಾ ಮತ್ತು ನಗರ ಹವೇಲಿಗಳಲ್ಲಿ ಚಂಡಮಾರುತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ರೂ. ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಪ್ರಧಾನಿಯವರು ಘೋಷಿಸಿದರು.

ಚಂಡಮಾರುತದಿಂದ ಉಂಟಾಗಿರುವ ನಂತರದ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೇಂದ್ರವು ಸಂತ್ರಸ್ತ ರಾಜ್ಯ ಸರ್ಕಾರಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಧಾನಿ ಹೇಳಿದರು. ಆಯಾ ರಾಜ್ಯ ಸರ್ಕಾರಗಳು ಹಾನಿಯ ಮೌಲ್ಯಮಾಪನಗಳನ್ನು ಕೇಂದ್ರದೊಂದಿಗೆ ಹಂಚಿಕೊಂಡ ನಂತರ ಈ ರಾಜ್ಯಗಳಿಗೆ ತಕ್ಷಣದ ಹಣಕಾಸಿನ ನೆರವು ನೀಡಲಾಗುವುದು ಎಂದರು.

ವಿಪತ್ತು ನಿರ್ವಹಣೆಗೆ ಸಂಬಂಧಿಸಿದ ಹೆಚ್ಚಿನ ವೈಜ್ಞಾನಿಕ ಅಧ್ಯಯನಗಳತ್ತ ನಾವು ಗಮನ ಹರಿಸಬೇಕಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಪೀಡಿತ ಪ್ರದೇಶಗಳಿಂದ ಜನರನ್ನು ತ್ವರಿತವಾಗಿ ಸ್ಥಳಾಂತರಿಸುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯದೊಳಗಿನ ಸಮನ್ವಯವನ್ನು ಹೆಚ್ಚಿಸಲು ಮತ್ತು ಆಧುನಿಕ ಸಂವಹನ ತಂತ್ರಗಳನ್ನು ಬಳಸಲು ಹೆಚ್ಚಿನ ಗಮನವನ್ನು ನೀಡಬೇಕೆಂದು ಅವರು ಕರೆ ನೀಡಿದರು. ಹಾನಿಗೊಳಗಾದ ಮನೆಗಳು ಮತ್ತು ಆಸ್ತಿಗಳನ್ನು ಸರಿಪಡಿಸಲು ತಕ್ಷಣ ಗಮನ ಹರಿಸಬೇಕೆಂದು ಪ್ರಧಾನಿ ತಿಳಿಸಿದರು.

 

ನಿಮ್ಮ ಸಲಹೆ ಸೂಚನೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹಂಚಿಕೊಳ್ಳಿ.
21 Exclusive Photos of PM Modi from 2021
Explore More
ಉತ್ತರ ಪ್ರದೇಶದ ವಾರಾಣಸಿಯಲ್ಲಿ ಕಾಶಿ ವಿಶ್ವನಾಥ ಧಾಮ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಉತ್ತರ ಪ್ರದೇಶದ ವಾರಾಣಸಿಯಲ್ಲಿ ಕಾಶಿ ವಿಶ್ವನಾಥ ಧಾಮ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
 Indian CEOs believe economic growth will improve over next 12 months: Survey

Media Coverage

Indian CEOs believe economic growth will improve over next 12 months: Survey
...

Nm on the go

Always be the first to hear from the PM. Get the App Now!
...
PM condoles demise of noted cartoonist Shri Narayan Debnath Ji
January 18, 2022
ಶೇರ್
 
Comments

The Prime Minister, Shri Narendra Modi has expressed deep grief over the demise of noted cartoonist Shri Narayan Debnath Ji.

In a tweet, the Prime Minister said;

"Shri Narayan Debnath Ji brightened several lives through his works, cartoons and illustrations. His works reflected his intellectual prowess. The characters he created will remain eternally popular. Pained by his demise. Condolences to his family and admirers. Om Shanti."