ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹರ್ ಘರ್ ತಿರಂಗಾವನ್ನು ಸಾಮೂಹಿಕ ಆಂದೋಲನವಾಗಿ ಮಾಡಲು ನಾಗರಿಕರು ತಮ್ಮ ಸಾಮಾಜಿಕ ಮಾಧ್ಯಮ ಡಿ.ಪಿ.ಗಳನ್ನು ತ್ರಿವರ್ಣ ಧ್ವಜಕ್ಕೆ ಬದಲಾಯಿಸುವಂತೆ ನಾಗರಿಕರಿಗೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು:
"ಇಂದು ವಿಶೇಷ ಆಗಸ್ಟ್ 2 ! ನಾವು ಆಜಾದಿ ಕಾ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಸಮಯದಲ್ಲಿ, ನಮ್ಮ ದೇಶವು #HarGharTiranga ವನ್ನು ಆಚರಿಸಲು ಸಜ್ಜಾಗಿದೆ, ಇದು ನಮ್ಮ ತ್ರಿವರ್ಣ ಧ್ವಜವನ್ನು ಆಚರಿಸುವ ಸಾಮೂಹಿಕ ಆಂದೋಲನವಾಗಿದೆ. ನಾನು ನನ್ನ ಸಾಮಾಜಿಕ ಮಾಧ್ಯಮ ಪುಟಗಳಲ್ಲಿ ಡಿಪಿಯನ್ನು ಬದಲಾಯಿಸಿದ್ದೇನೆ ಮತ್ತು ಅದೇ ರೀತಿ ಮಾಡುವಂತೆ ನಿಮ್ಮೆಲ್ಲರನ್ನೂ ಒತ್ತಾಯಿಸುತ್ತೇನೆ" ಎಂದು ಹೇಳಿದ್ದಾರೆ.
It is a special 2nd August today! At a time when we are marking Azadi Ka Amrit Mahotsav, our nation is all set for #HarGharTiranga, a collective movement to celebrate our Tricolour. I have changed the DP on my social media pages and urge you all to do the same. pic.twitter.com/y9ljGmtZMk
— Narendra Modi (@narendramodi) August 2, 2022


