ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನಾರಿ ಶಕ್ತಿ ವಂದನ ಅಧಿನಿಯಮ ತಿದ್ದುಪಡಿಯ ಕುರಿತು ಸಂಸತ್ತಿನಲ್ಲಿ ಸದ್ಯ ಚರ್ಚೆ ನಡೆಯುತ್ತಿದೆ ಎಂದು ಪ್ರಮುಖವಾಗಿ ಪ್ರಸ್ತಾಪಿಸಿರುವ ಅವರು, ನಿನ್ನೆ ರಾತ್ರಿ 1 ಗಂಟೆಯವರೆಗೆ ಚರ್ಚೆಗಳು ಮುಂದುವರೆದಿವೆ ಎಂದು ಅವರು ಹೇಳಿದರು.

ತಿದ್ದುಪಡಿಯ ಹಿಂದಿನ ಎಲ್ಲಾ ತಪ್ಪು ಕಲ್ಪನೆಗಳನ್ನು ತಾರ್ಕಿಕ ಪ್ರತಿಕ್ರಿಯೆಗಳೊಂದಿಗೆ ಪರಿಹರಿಸಲಾಗಿದೆ ಮತ್ತು ಸದಸ್ಯರು ಎತ್ತಿರುವ ಪ್ರತಿಯೊಂದು ಕಳವಳವನ್ನು ಪರಿಹರಿಸಲಾಗಿದೆ ಎಂದು ಅವರು ಹೇಳಿದರು. ವಿರೋಧದ ಸಮಸ್ಯೆಗಳನ್ನು ಸ್ಪಷ್ಟಪಡಿಸುವ ಅಗತ್ಯ ಮಾಹಿತಿಯನ್ನು ಎಲ್ಲಾ ಸದಸ್ಯರಿಗೆ ಒದಗಿಸಲಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.

ಮಹಿಳಾ ಮೀಸಲಾತಿ ವಿಷಯವು ಸುಮಾರು ನಾಲ್ಕು ದಶಕಗಳಿಂದ ರಾಜಕೀಯ ಚರ್ಚೆಗಳಿಗೆ ಸಾಕ್ಷಿಯಾಗಿದೆ ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿ, ದೇಶದ ಜನಸಂಖ್ಯೆಯ ಅರ್ಧದಷ್ಟು ಇರುವ ಮಹಿಳೆಯರು ತಮ್ಮ ಸರಿಯಾದ ಪ್ರಾತಿನಿಧ್ಯವನ್ನು ಪಡೆಯುವುದನ್ನು ಖಾತ್ರಿಪಡಿಸಿಕೊಳ್ಳುವ ಸಮಯ ಇದೀಗ ಬಂದಿದೆ ಎಂದು ಹೇಳಿದರು.

ಸ್ವಾತಂತ್ರ್ಯದ ದಶಕಗಳ ನಂತರವೂ, ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಕಡಿಮೆ ಪ್ರಾತಿನಿಧ್ಯವು ಸೂಕ್ತವಲ್ಲ ಮತ್ತು ಅದನ್ನು ಸರಿಪಡಿಸಬೇಕಾಗಿದೆ ಎಂದು ಅವರು ಉಲ್ಲೇಖಿಸಿದರು.

ಲೋಕಸಭೆಯಲ್ಲಿ ಶೀಘ್ರದಲ್ಲೇ ಮಸೂದೆ ಮೇಲೆ ಮತದಾನ ನಡೆಯುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದ ಪ್ರಧಾನಮಂತ್ರಿ, ಮಹಿಳಾ ಮೀಸಲಾತಿ ತಿದ್ದುಪಡಿಯ ಪರವಾಗಿ ಮತ ಚಲಾಯಿಸುವ ಮೂಲಕ ಎಲ್ಲಾ ರಾಜಕೀಯ ಪಕ್ಷಗಳು ಚಿಂತನಶೀಲ ಮತ್ತು ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳುವಂತೆ ಆಗ್ರಹಿಸಿದರು.

ದೇಶದ ಮಹಿಳೆಯರ ಪರವಾಗಿ ಮನವಿ ಮಾಡಿದ ಅವರು, ಯಾವುದೇ ಕ್ರಮವು ನಾರಿ ಶಕ್ತಿಯ ಭಾವನೆಗಳಿಗೆ ನೋವುಂಟು ಮಾಡದಂತೆ ಎಲ್ಲಾ ಸಂಸತ್ ಸದಸ್ಯರನ್ನು ಕರೆ ನೀಡಿದರು. ಕೋಟ್ಯಂತರ ಮಹಿಳೆಯರು ಸಂಸತ್ತು, ಅದರ ಉದ್ದೇಶ ಮತ್ತು ಅದರ ನಿರ್ಧಾರಗಳ ಕಡೆಗೆ ನೋಡುತ್ತಿದ್ದಾರೆ ಎಂದು ಅವರು ಉಲ್ಲೇಖಿಸಿದರು.

ಸಂಸದರು ತಮ್ಮ ಕುಟುಂಬಗಳಾದ ತಾಯಂದಿರು, ಸಹೋದರಿಯರು, ಹೆಣ್ಣುಮಕ್ಕಳು ಮತ್ತು ಹೆಂಡತಿಯರನ್ನು  ನೆನೆಪಿಸಿಕೊಳ್ಳಬೇಕು ಮತ್ತು ನಿರ್ಧಾರ ತೆಗೆದುಕೊಳ್ಳುವಾಗ ಅವರ ಆಂತರಿಕ ಆತ್ಮಸಾಕ್ಷಿಯನ್ನು ಆಲಿಸಬೇಕು ಎಂದು ಪ್ರಧಾನಮಂತ್ರಿ ಕರೆ ನೀಡಿದರು.

ಈ ತಿದ್ದುಪಡಿಯನ್ನು ರಾಷ್ಟ್ರದ ಮಹಿಳೆಯರಿಗೆ ಸೇವೆ ಸಲ್ಲಿಸಲು ಮತ್ತು ಗೌರವಿಸಲು ಒಂದು ಮಹತ್ವದ ಅವಕಾಶ ಎಂದು ಅವರು ಬಣ್ಣಿಸಿದರು ಮತ್ತು ಸದಸ್ಯರಿಗೆ ಹೊಸ ಅವಕಾಶಗಳಿಂದ ವಂಚಿತರಾಗಬಾರದು ಎಂದು ಕರೆ ನೀಡಿದರು.

ತಿದ್ದುಪಡಿಯನ್ನು ಸರ್ವಾನುಮತದಿಂದ ಅಂಗೀಕರಿಸಲಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ, ಅದು ನಾರಿ ಶಕ್ತಿ ಮತ್ತು ದೇಶದ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಹೇಳಿದರು.

ಇದನ್ನು ಐತಿಹಾಸಿಕ ಕ್ಷಣ ಎಂದು ಬಣ್ಣಿಸಿದ ಅವರು, ಭಾರತದ ಜನಸಂಖ್ಯೆಯ ಅರ್ಧದಷ್ಟು ಭಾಗವಾಗಿರುವ ಮಹಿಳೆಯರಿಗೆ ಸರಿಯಾದ ಪ್ರಾತಿನಿಧ್ಯವನ್ನು ನೀಡುವ ಮೂಲಕ ಇತಿಹಾಸವನ್ನು ಸೃಷ್ಟಿಸಲು ಎಲ್ಲಾ ಸದಸ್ಯರು ಒಗ್ಗೂಡಬೇಕೆಂದು  ಆಗ್ರಹಿಸಿದರು.

ಪ್ರಧಾನಮಂತ್ರಿ ಅವರು ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ;

 

“मैं सभी सांसदों से कहूंगा...

आप अपने घर में मां-बहन-बेटी-पत्नी सबका स्मरण करते हुए अपनी अंतरात्मा को सुनिए ...

देश की नारीशक्ति की सेवा का, उनके वंदन का ये बहुत बड़ा अवसर है।

उन्हें नए अवसरों से वंचित नहीं करिए।

ये संशोधन सर्वसम्मति से पारित होगा, तो देश की नारीशक्ति और सशक्त होगी… देश का लोकतंत्र और सशक्त होगा।

आइए… हम मिलकर आज इतिहास रचें। भारत की नारी को… देश की आधी आबादी को उसका हक दें।”

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s power sector set for strong FY27 growth on rising demand, capacity additions: Report

Media Coverage

India’s power sector set for strong FY27 growth on rising demand, capacity additions: Report
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam applauding the courage and perseverance of India's Youth
July 20, 2026

The Prime Minister, Shri Narendra Modi, shared a Sanskrit Subhashitam applauding the courage and perseverance of India's Youth:

"प्राप्यापदं न व्यथते कदाचिदुद्योगमन्विच्छति चाप्रमत्तः।

दुःखं च काले सहते महात्मा धुरन्धरस्तस्य जिताः सपत्नाः॥"

Shri Modi said that our youth is achieving historic success through their courage, self-confidence, and relentless hard work, and this is the greatest strength of a rapidly developing India.

The Prime Minister posted on X:

आज हमारे युवा साथी धैर्य, आत्मविश्वास और अथक परिश्रम से ऐतिहासिक सफलता हासिल कर रहे हैं। यही विकसित हो रहे भारत की सबसे बड़ी ताकत है।

प्राप्यापदं न व्यथते कदाचिदुद्योगमन्विच्छति चाप्रमत्तः।

दुःखं च काले सहते महात्मा धुरन्धरस्तस्य जिताः सपत्नाः॥