ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಸೆಪ್ಟೆಂಬರ್ 11ರಂದು ಡೆಹ್ರಾಡೂನ್‌ಗೆ ಭೇಟಿ ನೀಡಿದರು ಮತ್ತು ಪ್ರವಾಹ ಪರಿಸ್ಥಿತಿ ಮತ್ತು ಉತ್ತರಾಖಂಡದ ಪೀಡಿತ ಪ್ರದೇಶಗಳಲ್ಲಿ ಮೇಘಸೊಧೀೕಟ, ಮಳೆ ಮತ್ತು ಭೂಕುಸಿತದಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದರು.
ಪ್ರಧಾನಮಂತ್ರಿ ಅವರು ಡೆಹ್ರಾಡೂನ್‌ನಲ್ಲಿ ಕೈಗೊಂಡ ಪರಿಹಾರ ಮತ್ತು ಪುನರ್ವಸತಿ ಕ್ರಮಗಳನ್ನು ಪರಿಶೀಲಿಸಲು ಮತ್ತು ಉತ್ತರಾಖಂಡದಲ್ಲಿ ಸಂಭವಿಸಿರುವ ಹಾನಿಯ ಮೌಲ್ಯಮಾಪನಕ್ಕಾಗಿ ಅಧಿಕೃತ ಸಭೆ ನಡೆಸಿದರು. ಉತ್ತರಾಖಂಡಕ್ಕೆ 1200 ಕೋಟಿ ರೂ.ಗಳ ಆರ್ಥಿಕ ನೆರವು ಘೋಷಿಸಿದರು.

ಇಡೀ ಪ್ರದೇಶ ಮತ್ತು ಜನರು ಚೇತರಿಸಿಕೊಳ್ಳಲು ಸಹಾಯ ಮಾಡಲು ಬಹು ಆಯಾಮದ ವಿಧಾನದ ಅಗತ್ಯವನ್ನು ಪ್ರಧಾನಮಂತ್ರಿ ಒತ್ತಿ ಹೇಳಿದರು. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆಗಳನ್ನು ಪುನರ್ನಿರ್ಮಿಸುವುದು, ರಾಷ್ಟ್ರೀಯ ಹೆದ್ದಾರಿಗಳ ಪುನರ್‌ನಿರ್ಮಾಣ, ಶಾಲೆಗಳ ಪುನರ್ ನಿರ್ಮಾಣ, ಪಿ.ಎಂ.ಎನ್.ಆರ್.ಎಫ್ ಮೂಲಕ ಪರಿಹಾರ ಒದಗಿಸುವುದು ಮತ್ತು ಜಾನುವಾರುಗಳಿಗೆ ಮಿನಿ ಕಿಟ್‌ಗಳನ್ನು ವಿತರಿಸುವಂತಹ ಕ್ರಮಗಳು ಇದರಲ್ಲಿ ಸೇರಿವೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆ - ಗ್ರಾಮೀಣ ಅಡಿಯಲ್ಲಿ, ಪ್ರವಾಹದಿಂದ ಹಾನಿಗೊಳಗಾದ ಅರ್ಹ ಕುಟುಂಬಗಳಿಗೆ ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳನ್ನು ಪುನರ್‌ನಿರ್ಮಿಸಲು ಉತ್ತರಾಖಂಡ ಸರ್ಕಾರ ಸಲ್ಲಿಸಿದ ವಿಶೇಷ ಯೋಜನೆ ಅಡಿಯಲ್ಲಿ ಹಣಕಾಸಿನ ನೆರವು ನೀಡಲಾಗುವುದು.
ಹಾನಿಯ ಪ್ರಮಾಣವನ್ನು ನಿರ್ಣಯಿಸಲು ರಾಜ್ಯಗಳಿಗೆ ಭೇಟಿ ನೀಡಲು ಕೇಂದ್ರ ಸರ್ಕಾರವು ಈಗಾಗಲೇ ಅಂತರ-ಸಚಿವಾಲಯ ಕೇಂದ್ರ ತಂಡಗಳನ್ನು ಉತ್ತರಾಖಂಡಕ್ಕೆ ಕಳುಹಿಸಿದೆ ಮತ್ತು ಅವರ ವಿವರವಾದ ವರದಿಯ ಆಧಾರದ ಮೇಲೆ ಹೆಚ್ಚಿನ ಸಹಾಯವನ್ನು ಪರಿಗಣಿಸಲಾಗುವುದು.
ನೈಸರ್ಗಿಕ ವಿಕೋಪದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬ ಸದಸ್ಯರಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ, ಈ ಸಂಕಷ್ಟದ ಸಮಯದಲ್ಲಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತದೆ ಮತ್ತು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತದೆ ಎಂದು ಹೇಳಿದರು.

ಭೂಕುಸಿತ ಮತ್ತು ಪ್ರವಾಹ ಸೇರಿದಂತೆ ಇತ್ತೀಚಿನ ನೈಸರ್ಗಿಕ ವಿಕೋಪಗಳಿಂದ ಬಾಧಿತರಾದ ಉತ್ತರಾಖಂಡದ ಕುಟುಂಬಗಳನ್ನು ಪ್ರಧಾನಮಂತ್ರಿ ಭೇಟಿ ಮಾಡಿದರು. ನೊಂದ ಎಲ್ಲರಿಗೂ ತಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸಿದ ಅವರು, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪ ಸೂಚಿಸಿದರು.
ಪ್ರವಾಹ ಮತ್ತು ಸಂಬಂಧಿತ ವಿಪತ್ತುಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ.

ಇತ್ತೀಚಿನ ಪ್ರವಾಹ ಮತ್ತು ಭೂಕುಸಿತದಿಂದ ಅನಾಥರಾದ ಮಕ್ಕಳು ಮಕ್ಕಳಿಗಾಗಿ ಪಿ.ಎಂ. ಕೇರ್ಸ್ ಯೋಜನೆಯ ಮೂಲಕ ನೆರವು ಪಡೆಯಲಿದ್ದಾರೆ ಮತ್ತು ಅವರ ದೀರ್ಘಕಾಲೀನ ಆರೈಕೆ ಮತ್ತು ಕಲ್ಯಾಣವನ್ನು ಖಾತ್ರಿಪಡಿಸುತ್ತಾರೆ ಎಂದು ಪ್ರಧಾನಮಂತ್ರಿ ಘೋಷಿಸಿದರು.

ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ನಿಯಮಗಳ ವ್ಯಾಪ್ತಿಯಲ್ಲಿ ರಾಜ್ಯಗಳಿಗೆ ಮುಂಗಡ ವಿತರಣೆ ಸೇರಿದಂತೆ ಈ ಹಂತದಲ್ಲಿ ಘೋಷಿಸಲಾಗುತ್ತಿರುವ ನೆರವು ಮಧ್ಯಂತರ ಅವಧಿಗೆ ಎಂದು ಪ್ರಧಾನಮಂತ್ರಿ ಹೇಳಿದರು. ರಾಜ್ಯದ ಜ್ಞಾಪಕ ಪತ್ರ ಮತ್ತು ಕೇಂದ್ರ ತಂಡಗಳ ವರದಿಯ ಆಧಾರದ ಮೇಲೆ ಕೇಂದ್ರ ಸರ್ಕಾರವು ಮೌಲ್ಯಮಾಪನವನ್ನು ಮತ್ತಷ್ಟು ಪರಿಶೀಲಿಸುತ್ತದೆ. ತಕ್ಷಣದ ಪರಿಹಾರ ಮತ್ತು ಸ್ಪಂದನೆಗಾಗಿ ಪ್ರಯತ್ನಗಳನ್ನು ಮಾಡಿದ ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್, ಸೇನೆ, ರಾಜ್ಯ ಆಡಳಿತ ಮತ್ತು ಇತರ ಸೇವಾ ಆಧಾರಿತ ಸಂಸ್ಥೆಗಳ ಸಿಬ್ಬಂದಿಯ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು.

ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ನಿಯಮಗಳ ವ್ಯಾಪ್ತಿಯಲ್ಲಿ ರಾಜ್ಯಗಳಿಗೆ ಮುಂಗಡ ವಿತರಣೆ ಸೇರಿದಂತೆ ಈ ಹಂತದಲ್ಲಿ ಘೋಷಿಸಲಾಗುತ್ತಿರುವ ನೆರವು ಮಧ್ಯಂತರ ಅವಧಿಗೆ ಎಂದು ಪ್ರಧಾನಮಂತ್ರಿ ಹೇಳಿದರು. ರಾಜ್ಯದ ಜ್ಞಾಪಕ ಪತ್ರ ಮತ್ತು ಕೇಂದ್ರ ತಂಡಗಳ ವರದಿಯ ಆಧಾರದ ಮೇಲೆ ಕೇಂದ್ರ ಸರ್ಕಾರವು ಮೌಲ್ಯಮಾಪನವನ್ನು ಮತ್ತಷ್ಟು ಪರಿಶೀಲಿಸುತ್ತದೆ. ತಕ್ಷಣದ ಪರಿಹಾರ ಮತ್ತು ಸ್ಪಂದನೆಗಾಗಿ ಪ್ರಯತ್ನಗಳನ್ನು ಮಾಡಿದ ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್, ಸೇನೆ, ರಾಜ್ಯ ಆಡಳಿತ ಮತ್ತು ಇತರ ಸೇವಾ ಆಧಾರಿತ ಸಂಸ್ಥೆಗಳ ಸಿಬ್ಬಂದಿಯ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು.


ಪರಿಸ್ಥಿತಿಯ ಗಂಭೀರತೆಯನ್ನು ಒಪ್ಪಿಕೊಂಡ ಪ್ರಧಾನಮಂತ್ರಿ ಅವರು, ಪರಿಸ್ಥಿತಿಯನ್ನು ಪರಿಹರಿಸಲು ಕೇಂದ್ರ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತದೆ ಎಂದು ಭರವಸೆ ನೀಡಿದರು.
Interacted with victims of the floods and landslides in Uttarakhand. We remain committed to standing by them with all possible support. Their courage in the face of such adversity is truly moving. We will work together to help them rebuild their lives. pic.twitter.com/JvOjfX2c3X
— Narendra Modi (@narendramodi) September 11, 2025
Met the teams of NDRF, SDRF, Aapda Mitras and others who are working across Uttarakhand, providing assistance to all those who have been affected. I am very proud of their courage as well as dedication towards helping others in these testing circumstances. pic.twitter.com/1s5lBdCpO7
— Narendra Modi (@narendramodi) September 11, 2025
Chaired a review meeting on the flood situation in Uttarakhand. The devastation caused by floods in the state has saddened us all. My deepest condolences to the families who lost their loved ones. I pray that the people injured recover at the earliest. We are ensuring swift… pic.twitter.com/FIWDoU0NCD
— Narendra Modi (@narendramodi) September 11, 2025
उत्तराखंड में बाढ़ की स्थिति को लेकर एक समीक्षा बैठक की। राज्य में बाढ़ से हुए नुकसान को देखकर बहुत पीड़ा हुई है। जिन परिवारों ने अपने प्रियजनों को खोया है, उनके प्रति मेरी गहरी संवेदनाएं। इसके साथ ही मैं सभी घायल लोगों के जल्द स्वस्थ होने की कामना करता हूं। प्रभावित लोगों की… pic.twitter.com/iag1JI34q0
— Narendra Modi (@narendramodi) September 11, 2025
उत्तराखंड में बाढ़ और लैंडस्लाइड से प्रभावित लोगों से बातचीत कर उनका हाल जाना। हम उनके साथ पूरी मजबूती से खड़े हैं और उनकी हरसंभव सहायता के लिए प्रतिबद्ध हैं। pic.twitter.com/eYjXo05F55
— Narendra Modi (@narendramodi) September 11, 2025


