ಭಾರತಕ್ಕೆ ಅಧಿಕೃತ ಪ್ರವಾಸ ಕೈಗೊಂಡಿರುವ ಫಿನ್ಲ್ಯಾಂಡ್ ಗಣರಾಜ್ಯದ ಅಧ್ಯಕ್ಷರಾದ ಶ್ರೀ ಅಲೆಕ್ಸಾಂಡರ್ ಸ್ಟಬ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದರು.

ಈ ಭೇಟಿಯು ಭಾರತ ಮತ್ತು ಫಿನ್ಲ್ಯಾಂಡ್ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಅಧ್ಯಕ್ಷರಾದ ಸ್ಟಬ್ ಅವರು ಈ ಹಿಂದೆ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ತಾವು ಭಾರತಕ್ಕೆ ಅಧಿಕೃತ ಪ್ರವಾಸ ಕೈಗೊಂಡಿದ್ದೇನೆ ಮತ್ತು ಭಾರತದ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿ ಮತ್ತು ರಾಜ್ಯ ನಾಯಕತ್ವದ ಇತರ ಸದಸ್ಯರನ್ನು ಭೇಟಿ ಮಾಡಲಿದ್ದೇನೆ ಎಂದು ಹೇಳಿದ್ದರು. ಈ ಭೇಟಿಯು ಫಿನ್ಲೆಂಡ್ ಮತ್ತು ಭಾರತದ ನಡುವಿನ ವಾಣಿಜ್ಯ ಕ್ಷೇತ್ರ ಸೇರಿದಂತೆ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಅವರು ಹೇಳಿದರು.

ಫಿನ್ಲ್ಯಾಂಡ್ ಅಧ್ಯಕ್ಷರ ಎಕ್ಸ್ ಖಾತೆಯ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಶ್ರೀ ನರೇಂದ್ರ ಮೋದಿ ಅವರು ಹೀಗೆ ಹೇಳಿದ್ದಾರೆ;

"ಅಧ್ಯಕ್ಷರಾದ ಅಲೆಕ್ಸಾಂಡರ್ ಸ್ಟಬ್ ಅವರೇ, ಭಾರತಕ್ಕೆ ಸ್ವಾಗತ. ನಾನು ನಿಮ್ಮೊಂದಿಗೆ ಸಂಪೂರ್ಣವಾಗಿ ಒಪ್ಪುತ್ತೇನೆ, ನಿಮ್ಮ ಭೇಟಿಯು ಭಾರತ-ಫಿನ್ಲೆಂಡ್ ಸಂಬಂಧಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ. ನಾಳಿನ ನಮ್ಮ ಸಭೆಯನ್ನು ಮತ್ತು ರೈಸಿನಾ ಡೈಲಾಗ್ 2026ರಲ್ಲಿ ನಿಮ್ಮ ಮುಖ್ಯ ಭಾಷಣಕ್ಕಾಗಿ ನಾನು ಕುತೂಹಲದಿಂದ ಎದುರು ನೋಡುತ್ತಿದ್ದೇನೆ.

@alexstubb" 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India develops first indigenous expendable turbo jet engine in 350 kg thrust class

Media Coverage

India develops first indigenous expendable turbo jet engine in 350 kg thrust class
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 27 ಜುಲೈ 2026
July 27, 2026

Viksit Bharat in Motion: Indigenous Warships, Deepwater Energy, Transparent Exams & Cultural Revival