ಆಸ್ಟ್ರಿಯಾದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಅಲೆಕ್ಸಾಂಡರ್ ವ್ಯಾನ್ ಡೆರ್ ಬೆಲ್ಲೆನ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಯೆನ್ನಾದಲ್ಲಿ ಸಭೆ ನಡೆಸಿದರು. ಐತಿಹಾಸಿಕ ಮೂರನೇ ಅವಧಿಗೆ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಆಸ್ಟ್ರಿಯಾದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಅಲೆಕ್ಸಾಂಡರ್ ವ್ಯಾನ್ ಡೆರ್ ಬೆಲ್ಲೆನ್  ಅವರು ಅಭಿನಂದಿಸಿದರು.

 

ಉಭಯ ದೇಶಗಳು ತಮ್ಮ ರಾಜತಾಂತ್ರಿಕ ಬಾಂಧವ್ಯದ 75 ನೇ ವರ್ಷವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಆಸ್ಟ್ರಿಯಾ ಭೇಟಿಯು ಐತಿಹಾಸಿಕ ಮತ್ತು ಅತ್ಯಂತ ವಿಶೇಷವಾಗಿದೆ.  ಉಭಯ ನಾಯಕರು ಪರಸ್ಪರ ಹಿತಾಸಕ್ತಿಯ ದ್ವಿಪಕ್ಷೀಯ ಮತ್ತು ಜಾಗತಿಕ ವಿಷಯಗಳ ಕುರಿತು ಚರ್ಚಿಸಿದರು.  ಪರಿಸರ ಸುಸ್ಥಿರತೆ ಮತ್ತು ಜಾಗತಿಕ ತಾಪಮಾನ ಏರಿಕೆಯ ವಿರುದ್ಧದ ಆಲೋಚನೆಗಳನ್ನು ಉಭಯ ನಾಯಕರು ಹಂಚಿಕೊಂಡರು. ಈ ನಿಟ್ಟಿನಲ್ಲಿ, ಉಭಯ ನಾಯಕರು ನವೀಕರಿಸಬಹುದಾದ ಶಕ್ತಿ, ವಿಶೇಷವಾಗಿ ಸೌರ, ಜಲ ಮತ್ತು ಜೈವಿಕ ಇಂಧನಗಳಂತಹ ಕ್ಷೇತ್ರಗಳಲ್ಲಿ ಪರಸ್ಪರ ಪ್ರಯೋಜನಕಾರಿ ಅವಕಾಶಗಳ ಕುರಿತು ಚರ್ಚಿಸಿದರು. 

ತಮ್ಮ ಅನುಕೂಲಕ್ಕೆ ತಕ್ಕಂತೆ ಲಭ್ಯ ಸಮಯಾನುಸಾರವಾಗಿ ಭಾರತಕ್ಕೆ ಭೇಟಿ ನೀಡುವಂತೆ ಅಧ್ಯಕ್ಷ ಶ್ರೀ ವ್ಯಾನ್ ಡೆರ್ ಬೆಲ್ಲೆನ್ ಅವರಿಗೆ ಪ್ರಧಾನಮಂತ್ರಿಯವರು ಆಹ್ವಾನವನ್ನು ಪುನರುಚ್ಚರಿಸಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's 1 Trillion Retail Moment: Dawn of Retail Revenue Intelligence

Media Coverage

India's 1 Trillion Retail Moment: Dawn of Retail Revenue Intelligence
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 27 ಜೂನ್ 2026
June 27, 2026

Appreciation for PM Modi's Development-Focused and People-Centric Governance