ಕಳೆದ ವರ್ಷ ನೇಪಾಳ ಪ್ರಧಾನಿ ನಡೆಸಿದ ಭೇಟಿಯನ್ನು ಪ್ರಧಾನಿ ಮೋದಿ ಸ್ಮರಣೆ
ನೇಪಾಳವು ಭಾರತದ ವಿಶೇಷ ಪಾಲುದಾರ ದೇಶ ಎಂದ ಪ್ರಧಾನಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ನೇಪಾಳದ ಪ್ರಧಾನಮಂತ್ರಿ ಆರ್.ಟಿ. ಪುಷ್ಪ ಕಮಲ್ ದಹಲ್ 'ಪ್ರಚಂಡ ದೂರವಾಣಿ ಕರೆ ಮಾಡಿ ಲೋಕಸಭಾ ಚುನಾವಣೆ ಗೆಲುವಿನ ಹಿನ್ನೆಲೆಯಲ್ಲಿ ಶುಭಾಶಯ ತಿಳಿಸಿದ್ದಾರೆ. ಭಾರತದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಸಾರ್ವತ್ರಿಕ ಚುನಾವಣೆಯಲ್ಲಿ ಮೂರನೇ ಅವಧಿಗೆ ಐತಿಹಾಸಿಕ ಜಯಗಳಿಸಿದ ನರೇಂದ್ರ ಮೋದಿಯವರನ್ನು ಪ್ರಧಾನಿ ಪ್ರಚಂಡ ಅಭಿನಂದಿಸಿದರು. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭಾರತ-ನೇಪಾಳ ಸಂಬಂಧಗಳು ಮತ್ತಷ್ಟು ಬಲಗೊಳ್ಳಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ ಅವರು ಪ್ರಧಾನಿ ‘ಪ್ರಚಂಡ’ ಅವರ ಶುಭಾಶಯಗಳಿಗೆ ಧನ್ಯವಾದ ಅರ್ಪಿಸಿದರು. ಕಳೆದ ವರ್ಷ ನೇಪಾಳದ ಪ್ರಧಾನಮಂತ್ರಿ ಭಾರತಕ್ಕೆ ಭೇಟಿ ನೀಡಿದ್ದನ್ನು ಅವರು ನೆನಪಿಸಿಕೊಂಡರು, ಉಭಯ ದೇಶಗಳ ನಡುವಿನ ಸೌಹಾರ್ದ ಮತ್ತು ಬಹುಮುಖಿ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಹಲವಾರು ಉಪಕ್ರಮಗಳನ್ನು ಕೈಗೊಂಡಿರುವ ಕುರಿತು ನರೇಂದ್ರ ಮೋದಿ ಮತ್ತು ಪುಷ್ಪ ಕಮಲ್‌ ದಹಲ್‌ ಪ್ರಚಂಡ ಚರ್ಚಿಸಿದರು.

ನೇಪಾಳವು ಭಾರತದೊಂದಿಗೆ ಆಳವಾದ ಸಾಂಸ್ಕೃತಿಕ ಮತ್ತು ನಾಗರೀಕ ಸಂಬಂಧಗಳನ್ನು ಹಂಚಿಕೊಳ್ಳುತ್ತದೆ ಮತ್ತು ಭಾರತದ 'ನೆರೆಹೊರೆ' ನೀತಿಯಲ್ಲಿ ವಿಶೇಷ ಪಾಲುದಾರ ದೇಶವಾಗಿದೆ. ಉಭಯ ದೇಶಗಳ ನಡುವಿನ ಉನ್ನತ ಮಟ್ಟದ ವಿನಿಮಯದ ಸಂಪ್ರದಾಯವನ್ನು ಮುಂದುವರೆಸಿದೆ ಎಂದು ಸಮಾಲೋಚಿಸಲಾಯಿತು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India unveils 20 major maritime reforms to cut logistics costs and boost global trade presence

Media Coverage

India unveils 20 major maritime reforms to cut logistics costs and boost global trade presence
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 9 ಎಪ್ರಿಲ್ 2026
April 09, 2026

Self-Reliant India Rising: Record Investments, 3rd in Renewables & Affordable Skies Under PM Modi