ಕ್ರೆಮ್ಲಿನ್ ನ ಸೇಂಟ್ ಆಂಡ್ರ್ಯೂ ಹಾಲ್ ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ, ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ವ್ಲಾಡಿಮಿರ್ ಪುಟಿನ್ ರವರು ಭಾರತ-ರಷ್ಯಾ ಸಂಬಂಧಗಳ ಉತ್ತಮಗೊಳಿಸುವಿಕೆಗೆ ನೀಡಿದ ಕೊಡುಗೆಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ರಷ್ಯಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ "ದಿ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್" ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಈ ಪ್ರಶಸ್ತಿಯನ್ನು 2019ರಲ್ಲಿ ಘೋಷಿಸಲಾಗಿತ್ತು.

ಈ ಪ್ರಶಸ್ತಿಯನ್ನು ಸ್ವೀಕರಿಸಿದ ಪ್ರಧಾನಮಂತ್ರಿಯವರು, ಅದನ್ನು ಭಾರತದ ಜನತೆಗೆ ಮತ್ತು ಭಾರತ ಹಾಗೂ ರಷ್ಯಾ ದೇಶಗಳ ನಡುವಿನ ಸಾಂಪ್ರದಾಯಿಕ ಸ್ನೇಹ ಸಂಬಂಧಗಳಿಗೆ ಸಮರ್ಪಿಸಿದರು. ತಮಗೆ ದೊರೆತ ಈ ಮಾನ್ಯತೆಯು ಉಭಯ ದೇಶಗಳ ನಡುವಿನ ವಿಶಿಷ್ಟವಾದ ವಿಶೇಷ ವ್ಯೂಹಾತ್ಮಕ ಪಾಲುದಾರಿಕೆಯನ್ನು ಬಿಂಬಿಸುತ್ತದೆ ಎಂದು ಅವರು ಹೇಳಿದರು.

ಈ ಪ್ರಶಸ್ತಿಯನ್ನು 300 ವರ್ಷಗಳ ಹಿಂದೆ ಸ್ಥಾಪಿಸಲಾಗಿದ್ದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಈ ಪ್ರಶಸ್ತಿಯನ್ನು ಪಡೆದ ಮೊದಲ ಭಾರತೀಯ ರಾಜಕೀಯ ಧುರೀಣರಾಗಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
One of the world’s first canal-top solar projects placed a 750-meter solar array above an Indian irrigation canal, generating clean power while saving an estimated 9 million liters of water each year

Media Coverage

One of the world’s first canal-top solar projects placed a 750-meter solar array above an Indian irrigation canal, generating clean power while saving an estimated 9 million liters of water each year
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 17 ಜುಲೈ 2026
July 17, 2026

Green Trains, Private Rockets & Global Partnerships — PM Modi’s New India is Playing to Win