ಫಿನ್ ಲ್ಯಾಂಡ್ ನ ಪ್ರಧಾನಮಂತ್ರಿ ಘನತೆವೆತ್ತ ಶ್ರೀ. ಜುಹಾ ಸಿಪಿಲಾ ಅವರು ಸೋಮವಾರ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿದ್ದರು.
ಪ್ರಧಾನಮಂತ್ರಿ ಸಿಪಿಲಾ ಅವರು ಐತಿಹಾಸಿಕ ಸರಕು ಮತ್ತು ಸೇವೆಗಳ ತೆರಿಗೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದರು.
ಇಬ್ಬರೂ ನಾಯಕರು, 2016ರ ಫೆಬ್ರವರಿಯಲ್ಲಿ ಸಿಪಿಲಾ ಅವರು ಮುಂಬೈನಲ್ಲಿ ನಡೆದ ಮೇಕ್ ಇನ್ ಇಂಡಿಯಾ ಸಪ್ತಾಹದಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ನಡೆದಿದ್ದ ಸಭೆಯ ನಂತರದ ದ್ವಿಪಕ್ಷೀಯ ಬಾಂಧವ್ಯದ ಪ್ರಗತಿಯ ಪರಾಮರ್ಶೆ ನಡೆಸಿದರು.
ಇಬ್ಬರೂ ನಾಯಕರು ವಾಣಿಜ್ಯ ಮತ್ತು ಹೂಡಿಕೆ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಮಾರ್ಗೋಪಾಯಗಳ ಕುರಿತು ಚರ್ಚಿಸಿದರು.


