ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಶ್ರೀ ನವೀನಚಂದ್ರ ರಾಮಗೂಲಮ್ ಅವರು ಇಂದು ಮಾರಿಷಸ್‌ ನ ರೆಡ್ಯೂಟ್‌ ನಲ್ಲಿ ಅಟಲ್ ಬಿಹಾರಿ ವಾಜಪೇಯಿ ಸಾರ್ವಜನಿಕ ಸೇವೆ ಮತ್ತು ನಾವೀನ್ಯತೆ ಸಂಸ್ಥೆಯನ್ನು ಜಂಟಿಯಾಗಿ ಉದ್ಘಾಟಿಸಿದರು. ಭಾರತ-ಮಾರಿಷಸ್ ಅಭಿವೃದ್ಧಿ ಸಹಭಾಗಿತ್ವದ ಅಡಿಯಲ್ಲಿ ಜಾರಿಗೆ ತರಲಾದ ಈ ಮಹತ್ವದ ಯೋಜನೆಯು ಸಾಮರ್ಥ್ಯ ವೃದ್ಧಿಗೆ ಭಾರತದ ಬದ್ಧತೆಯನ್ನು ಒತ್ತಿಹೇಳುತ್ತದೆ.

2017ರ ತಿಳುವಳಿಕೆ ಒಪ್ಪಂದದ ಅಡಿಯಲ್ಲಿ 4.74 ಮಿಲಿಯನ್ ಡಾಲರ್‌ ಅನುದಾನದ ಮೂಲಕ ಹಣಕಾಸು ಒದಗಿಸಲಾದ ಈ ಅತ್ಯಾಧುನಿಕ ಸಂಸ್ಥೆಯು ಸಚಿವಾಲಯಗಳು, ಸಾರ್ವಜನಿಕ ಕಚೇರಿಗಳು, ಅರೆ-ಸರ್ಕಾರಿ ಸಂಸ್ಥೆಗಳು ಮತ್ತು ಸರ್ಕಾರಿ ಉದ್ಯಮಗಳಲ್ಲಿ ಮಾರಿಷಸ್ ನಾಗರಿಕ ಸೇವಕರ ತರಬೇತಿ ಅಗತ್ಯಗಳನ್ನು ಪೂರೈಸುತ್ತದೆ. ತರಬೇತಿಯ ಹೊರತಾಗಿ, ಸಂಸ್ಥೆಯು ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆಯ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ. ಸಂಶೋಧನೆ, ಆಡಳಿತ ಅಧ್ಯಯನಗಳು ಮತ್ತು ಭಾರತದೊಂದಿಗೆ ಸಾಂಸ್ಥಿಕ ಸಂಬಂಧಗಳನ್ನು ಉತ್ತೇಜಿಸುತ್ತದೆ.

 

ಈ ಸಂದರ್ಭದಲ್ಲಿ, ಭಾರತದಲ್ಲಿ ತರಬೇತಿ ಮತ್ತು ಶಿಕ್ಷಣ ಹಾಗೂ ಐಟಿಇಸಿ ಮತ್ತು ಭಾರತ ಸರ್ಕಾರದ ವಿದ್ಯಾರ್ಥಿವೇತನದ ಪಡೆದಿರುವ ಹಳೆಯ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿಯವರು ಸಂವಾದ ನಡೆಸಿದರು. ಈ ಸಾಮರ್ಥ್ಯ ವೃದ್ಧಿ ವಿನಿಮಯವು ಉಭಯ ದೇಶಗಳ ನಡುವಿನ ಬಲವಾದ ಜನರು-ಜನರ ನಡುವಿನ ಸಂಬಂಧವನ್ನು ಇನ್ನಷ್ಟು ಗಾಢಗೊಳಿಸಿದೆ.

ಜಾಗತಿಕ ದಕ್ಷಿಣ ರಾಷ್ಟ್ರಗಳಿಗೆ ಭಾರತದ ಬದ್ಧತೆಗೆ ಅನುಗುಣವಾಗಿ, ಸಂಸ್ಥೆಯು ಹಿಂದೂ ಮಹಾಸಾಗರ ಪ್ರದೇಶದಲ್ಲಿ ವಿಶ್ವಾಸಾರ್ಹ ಪಾಲುದಾರನಾಗಿ ಭಾರತದ ಪಾತ್ರವನ್ನು ಮತ್ತು ಸಮಗ್ರ ಭಾರತ-ಮಾರಿಷಸ್ ಪಾಲುದಾರಿಕೆಯನ್ನು ಬಲಪಡಿಸುವ ಅದರ ಅಚಲ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's high-flying ambitions: How policy overhaul doubled nation's MRO footprint from 96 to 166

Media Coverage

India's high-flying ambitions: How policy overhaul doubled nation's MRO footprint from 96 to 166
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 16 ಮೇ 2026
May 16, 2026

Petroleum Reserves Secured, Dollars Pouring In, AI Supercluster Rising — Welcome to PM Modi’s New India