ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ಸಂಜೆ ಇಸ್ರೇಲ್ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಬೆಂಜಮಿನ್ ನೆತೆನ್ಯಾಹೂ ಅವರಿಂದ ಬಂದ ದೂರವಾಣಿ ಕರೆ ಸ್ವೀಕರಿಸಿದರು.
ಇಬ್ಬರೂ ನಾಯಕರು ದ್ವಿಪಕ್ಷೀಯ ಬಾಂಧವ್ಯದಲ್ಲಿ ಆಗಿರುವ ಅದ್ಭುತ ಪ್ರಗತಿಯ ಬಗ್ಗೆ ಪರಾಮರ್ಶೆ ನಡೆಸಿದರು. ಸಾಂಕ್ರಾಮಿಕ ಕೋವಿಡ್ -19 ಹಿನ್ನೆಲೆಯಲ್ಲಿ ಜಾಗತಿಕ ಪರಿಸ್ಥಿತಿಯ ಕುರಿತಂತೆಯೂ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡರು.


