ಸಮಕಾಲೀನವಾಗಿ ನಡೆಯುತ್ತಿರುವ ದ್ವಿಪಕ್ಷೀಯ ಸಹಯೋಗವನ್ನು ಉಭಯ ನಾಯಕರು ಪರಾಮರ್ಶಿಸಿದರು ಮತ್ತು ಪಾಲುದಾರಿಕೆಯನ್ನು ಇನ್ನಷ್ಟು ಗಾಢಗೊಳಿಸಲು ಬದ್ಧತೆಯನ್ನು ಪುನರುಚ್ಚರಿಸಿದರು
ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅವರುಗಳು ಅಭಿಪ್ರಾಯ ವಿನಿಮಯ ಮಾಡಿಕೊಂಡರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫಿನ್ಲೆಂಡ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗೆ ಇಂದು ದೂರವಾಣಿ ಸಂಭಾಷಣೆ ನಡೆಸಿದರು.

ಡಿಜಿಟಲೀಕರಣ, ಸುಸ್ಥಿರತೆ ಮತ್ತು ಚಲನಶೀಲತೆ ಕ್ಷೇತ್ರಗಳು ಸೇರಿದಂತೆ ಉಭಯ ದೇಶಗಳ ನಡುವಿನ ನಡೆಯುತ್ತಿರುವ ಸಹಯೋಗದ ಯೋಜನೆಗಳನ್ನು ಉಭಯ ನಾಯಕರು ಮಾಹಿತಿ ವಿನಿಮಯ ಮಾಡಿಕೊಳ್ಳುವ ಮೂಲಕ ಪರಿಶೀಲಿಸಿದರು. ಕ್ವಾಂಟಮ್, 5ಜಿ-6ಜಿ, ಕೃತಕ ಬುದ್ಧಿಮತ್ತೆ ಮತ್ತು ಸೈಬರ್-ಸೆಕ್ಯುರಿಟಿ ಕ್ಷೇತ್ರಗಳನ್ನು ಒಳಗೊಂಡಂತೆ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಆಳಗೊಳಿಸಲು ಅವರುಗಳು ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು. 

ಉಕ್ರೇನ್‌ ನಲ್ಲಿನ ಪರಿಸ್ಥಿತಿ ಸೇರಿದಂತೆ ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ನಿಕಟವಾದ ಭಾರತ-ಇಯು ಸಂಬಂಧಗಳಿಗೆ ಫಿನ್‌ಲ್ಯಾಂಡ್‌ ನ ಬೆಂಬಲವನ್ನು ಅಧ್ಯಕ್ಷರಾದ ಶ್ರೀ ಸ್ಟಬ್ ಅವರು ವ್ಯಕ್ತಪಡಿಸಿದರು ಮತ್ತು ಪರಸ್ಪರ ಲಾಭದಾಯಕ ಎಫ್‌ಟಿಎಯನ್ನು ಶೀಘ್ರವಾಗಿ ತೀರ್ಮಾನಿಸುವುದಾಗಿ ತಿಳಿಸಿದರು.  

ಉಭಯ ನಾಯಕರು ಸಂಪರ್ಕದಲ್ಲಿರಲು ಸಹಮತ ವ್ಯಕ್ತಪಡಿಸಿದರು. 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India adds 8.43M mobile users in March as telcos see sharp growth: TRAI

Media Coverage

India adds 8.43M mobile users in March as telcos see sharp growth: TRAI
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 23 ಎಪ್ರಿಲ್ 2026
April 23, 2026

Inclusive Innovation: Empowering Every Citizen in the New India Under the Leadership of PM Modi