ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ಜಯಲಲಿತಾ ಅವರನ್ನು ಅವರ ಜನ್ಮದಿನವಾದ ಇಂದು ಸ್ಮರಿಸಿದ್ದಾರೆ. ತಮಿಳುನಾಡಿನ ಅಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಸಹಾನುಭೂತಿಯುಳ್ಳ ನಾಯಕಿ ಮತ್ತು ಅತ್ಯುತ್ತಮ ಆಡಳಿತಗಾರ್ತಿ ಎಂದು ಅವರು ಜಯಲಲಿತಾ ಅವರನ್ನು ಶ್ಲಾಘಿಸಿದ್ದಾರೆ.

Xನ ಪ್ರತ್ಯೇಕ ಪೋಸ್ಟ್ ನಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು:

"ಜಯಲಲಿತಾ ಅವರ ಜನ್ಮದಿನದಂದು ನಾನು ಅವರನ್ನು ಸ್ಮರಿಸುತ್ತೇನೆ. ತಮಿಳುನಾಡಿನ ಅಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಸಹಾನುಭೂತಿಯುಳ್ಳ ನಾಯಕಿ ಮತ್ತು ಅತ್ಯುತ್ತಮ ಆಡಳಿತಗಾರ್ತಿಯಾಗಿ ಅವರು ವ್ಯಾಪಕವಾಗಿ ಮೆಚ್ಚುಗೆ ಪಡೆದಿದ್ದಾರೆ. ಅಸಂಖ್ಯಾತ ಸಂದರ್ಭಗಳಲ್ಲಿ ಅವರೊಂದಿಗೆ ಮಾತನಾಡುವ ಅವಕಾಶ ನನಗೆ ಸಿಕ್ಕಿದ್ದು ನನ್ನ ಸೌಭಾಗ್ಯ. ಅವರು ತುಂಬಾ ಆತ್ಮೀಯ ವ್ಯಕ್ತಿಯಾಗಿದ್ದು, ಜನಪರ ಉಪಕ್ರಮಗಳಿಗೆ ಬೆಂಬಲ ನೀಡುತ್ತಿದ್ದರು" ಎಂದು ಬರೆದಿದ್ದಾರೆ.

“ஜெயலலிதா அவர்களின் பிறந்தநாளில் அவரை நினைவுகூர்கிறேன். தமிழ்நாட்டின் வளர்ச்சிக்காக தமது வாழ்க்கையை அர்ப்பணித்துக் கொண்ட அவர், கருணைமிக்க தலைவராகவும், திறமைமிக்க நிர்வாகியாகவும் நன்கு அறியப்பட்டவர். பல சந்தர்ப்பங்களில் அவருடன் உரையாடும் வாய்ப்பை நான் பெற்றிருந்தது எனது கௌரவமாகும். அவர் எப்போதும் அன்பாகவும் மக்கள் நலன் சார்ந்த முன்முயற்சிகளுக்கு ஆதரவாகவும் இருந்தவர்.”

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Vikas Bhi, Virasat Bhi: How JATAN, AI and Digital Archives are revolutionising India’s cultural heritage preservation

Media Coverage

Vikas Bhi, Virasat Bhi: How JATAN, AI and Digital Archives are revolutionising India’s cultural heritage preservation
NM on the go

Nm on the go

Always be the first to hear from the PM. Get the App Now!
...
ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಭಾಗವಹಿಸಿದ ಶೂರರಿಗೆ ಪ್ರಧಾನಮಂತ್ರಿ ಗೌರವ ನಮನ
August 09, 2026

ಭಾರತ ಬಿಟ್ಟು ತೊಲಗಿ ಐತಿಹಾಸಿಕ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರನ್ನೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮರಿಸಿದ್ದಾರೆ ಮತ್ತು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಶೌರ್ಯ ಮತ್ತು ದೃಢಸಂಕಲ್ಪಕ್ಕೆ ಗೌರವ ಸಮರ್ಪಿಸಿದ್ದಾರೆ. ಮಹಾತ್ಮಾ ಗಾಂಧಿಯವರ ನಾಯಕತ್ವದಿಂದ ಪ್ರೇರಿತವಾದ ಭಾರತ ಬಿಟ್ಟು ತೊಲಗಿ ಚಳವಳಿಯ ಕರೆಯು ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಚೈತನ್ಯ ತುಂಬಿತು ಮತ್ತು ವಸಾಹತುಶಾಹಿ ಆಳ್ವಿಕೆಯನ್ನು ತೊಡೆದು ಹಾಕಲು ಭಾರತದ ಜನರ ಅಚಲ ಸಂಕಲ್ಪವನ್ನು ಪ್ರತಿಬಿಂಬಿಸಿತ್ತು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

ಐತಿಹಾಸಿಕ ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರನ್ನು ಸ್ಮರಿಸುತ್ತಿದ್ದೇನೆ. ಅವರ ಸ್ಥೈರ್ಯ ಪ್ರತಿಯೊಬ್ಬ ಭಾರತೀಯನಿಗೂ ಸದಾ ಸ್ಫೂರ್ತಿಯ ಸೆಲೆಯಾಗಿರಲಿದೆ. ಮಹಾತ್ಮಾ ಗಾಂಧಿಯವರ ನಾಯಕತ್ವದಿಂದ ಪ್ರೇರಿತವಾದ ಭಾರತ ಬಿಟ್ಟು ತೊಲಗಿ ಎಂಬ ಘೋಷಣೆಯು ನಮ್ಮ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಚೈತನ್ಯವನ್ನು ತುಂಬಿತು ಮತ್ತು ವಸಾಹತುಶಾಹಿ ಆಳ್ವಿಕೆಯಿಂದ ಮುಕ್ತರಾಗಲು ನಮ್ಮ ಜನರ ಅಚಲ ದೃಢಸಂಕಲ್ಪವನ್ನು ಪ್ರತಿಬಿಂಬಿಸಿತು.