ಭಾರತದ ಯುಪಿಐ ಮತ್ತು ಸಿಂಗಾಪುರದ ಪೇ ನೌ ನಡುವೆ ಗಡಿಯಾಚೆಗಿನ ಸಂಪರ್ಕ ವ್ಯವಸ್ಥೆಗೆ ಚಾಲನೆ ನೀಡಲಾಗುವುದು
ತ್ವರಿತ ಮತ್ತು ಕಡಿಮೆ ವೆಚ್ಚದ ಹಣ ವರ್ಗಾವಣೆಯನ್ನು ಸಕ್ರಿಯಗೊಳಿಸಲು ಈ ಎರಡು ಪಾವತಿ ವ್ಯವಸ್ಥೆಗಳನ್ನು ಜೋಡಿಸಲಾಗುತ್ತಿದೆ
ಸಿಂಗಾಪುರದಲ್ಲಿರುವ ಭಾರತೀಯ ವಲಸಿಗರಿಗೆ ಸಿಂಗಾಪುರದಿಂದ ಭಾರತಕ್ಕೆ ಮತ್ತು ಭಾರತದಿಂದ ಸಿಂಗಾಪುರಕ್ಕೆ ಹಣವನ್ನು ವರ್ಗಾವಣೆ ಮಾಡಲು ಇದು ಸಹಾಯ ಮಾಡುತ್ತದೆ

ಭಾರತದ ಏಕೀಕೃತ ಪಾವತಿ ವ್ಯವಸ್ಥೆ (ಯುಪಿಐ) ಮತ್ತು ಸಿಂಗಾಪುರದ ಪೇ ನೌ ನಡುವಿನ ಗಡಿಯಾಚೆಗಿನ ಸಂಪರ್ಕದ ಚಾಲನೆಗೆ ಫೆಬ್ರವರಿ 21, 2023 ರಂದು ಬೆಳಿಗ್ಗೆ 11 ಗಂಟೆಗೆ (ಭಾರತೀಯ ಕಾಲಮಾನ) ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಸಿಂಗಾಪುರದ ಪ್ರಧಾನಮಂತ್ರಿ ಶ್ರೀ ಲೀ ಸಿಯೆನ್ ಲೂಂಗ್ ಅವರು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ. ಸಾಕ್ಷಿಯಾಗಲಿದ್ದಾರೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ ಬಿ ಐ) ಗವರ್ನರ್ ಶ್ರೀ ಶಕ್ತಿಕಾಂತ ದಾಸ್ ಮತ್ತು ಸಿಂಗಾಪುರದ ಹಣಕಾಸು ಪ್ರಾಧಿಕಾರದ (ಎಂ ಎ ಎಸ್) ವ್ಯವಸ್ಥಾಪಕ ನಿರ್ದೇಶಕ ಶ್ರೀ ರವಿ ಮೆನನ್ ಅವರು ಈ ವ್ಯವಸ್ಥೆಗೆ ಚಾಲನೆ ನೀಡಲಿದ್ದಾರೆ.

ಫಿನ್‌ಟೆಕ್ ನಾವೀನ್ಯತೆಯಲ್ಲಿ ಭಾರತವು ವೇಗವಾಗಿ ಬೆಳೆಯುತ್ತಿರುವ ಪರಿಸರ ವ್ಯವಸ್ಥೆಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೂರದರ್ಶಿ ನಾಯಕತ್ವವು ಭಾರತದ ಅತ್ಯುತ್ತಮ ದರ್ಜೆಯ ಡಿಜಿಟಲ್ ಪಾವತಿ ಮೂಲಸೌಕರ್ಯವನ್ನು ಜಾಗತೀಕರಣಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಯುಪಿಐನ ಪ್ರಯೋಜನಗಳು ಭಾರತಕ್ಕೆ ಮಾತ್ರ ಸೀಮಿತವಾಗದೆ, ಇತರ ದೇಶಗಳು ಸಹ ಅದರಿಂದ ಪ್ರಯೋಜನ ಪಡೆಯುವುದನ್ನು ಖಚಿತಪಡಿಸಿಕೊಳ್ಳುವುದು ಪ್ರಧಾನ ಮಂತ್ರಿಯವರ ಪ್ರಮುಖ ಆದ್ಯತೆಯಾಗಿದೆ. ಈ ಎರಡು ಪಾವತಿ ವ್ಯವಸ್ಥೆಗಳ ಸಂಪರ್ಕವು ಎರಡೂ ದೇಶಗಳ ನಿವಾಸಿಗಳಿಗೆ ಗಡಿಯಾಚೆಗಿನ ಹಣ ರವಾನೆಯನ್ನು ವೇಗವಾಗಿ ಮತ್ತು ವೆಚ್ಚ-ಪರಿಣಾಮಕಾರಿಯಾಗಿಸಲು ಅನುವು ಮಾಡಿಕೊಡುತ್ತದೆ. ಇದು ಸಿಂಗಾಪುರದಲ್ಲಿರುವ ಭಾರತೀಯ ವಲಸಿಗರಿಗೆ, ವಿಶೇಷವಾಗಿ ವಲಸೆ ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಗೆ ಸಿಂಗಾಪುರದಿಂದ ಭಾರತಕ್ಕೆ ಹಾಗೂ ಬಾರತದಿಂದ ಸಿಂಗಾಪುರಕ್ಕೆ ತ್ವರಿತವಾಗಿ ಮತ್ತು ಕಡಿಮೆ ವೆಚ್ಚದಲ್ಲಿ ಹಣವನ್ನು ವರ್ಗಾಯಿಸಲು ಸಹಾಯ ಮಾಡುತ್ತದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India remains among best-performing major economies: S&P Global

Media Coverage

India remains among best-performing major economies: S&P Global
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 19 ಎಪ್ರಿಲ್ 2026
April 19, 2026

Building a Stronger Bharat: Infrastructure Revolution, Economic Resilience & Inclusive Welfare Under PM Modi