ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 3,000 ಕ್ಕೂ ಹೆಚ್ಚು ಸ್ಥಳಗಳಲ್ಲಿ ವರ್ಚುವಲ್ ಚಾಲನೆ
ಮೊದಲ ದಿನದಂದು ಪ್ರತಿ ಸ್ಥಳದಲ್ಲಿ ಸುಮಾರು 100 ಫಲಾನುಭವಿಗಳಿಗೆ ಲಸಿಕೆ

ಪ್ರಧಾನಿ ಶ್ರೀ ನರೇಂದ್ರ ಮೋದಿಯವರು 2021 ರ ಜನವರಿ 16 ರಂದು ಬೆಳಿಗ್ಗೆ 10.30 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಾದ್ಯಂತದ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಇದು ದೇಶದ ಉದ್ದಗಲಕ್ಕೂ ನಡೆಯುವ ವಿಶ್ವದ ಅತಿದೊಡ್ಡ ಲಸಿಕಾ ಕಾರ್ಯಕ್ರಮವಾಗಿದೆ. ಚಾಲನೆಯ ಸಮಯದಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 3006 ಸ್ಥಳಗಳನ್ನು ಸಂಪರ್ಕಿಸಲಾಗುವುದು. ಉದ್ಘಾಟನಾ ದಿನದಂದು ಪ್ರತಿ ಸ್ಥಳದಲ್ಲಿ ಸುಮಾರು 100 ಫಲಾನುಭವಿಗಳಿಗೆ ಲಸಿಕೆ ನೀಡಲಾಗುವುದು.
ಈ ಲಸಿಕಾ ಕಾರ್ಯಕ್ರಮವು ಲಸಿಕೆ ನೀಡಬೇಕಾದ ಆದ್ಯತೆಯ ಗುಂಪುಗಳನ್ನು ಆಧರಿಸಿದೆ ಮತ್ತು ಐಸಿಡಿಎಸ್ ಕಾರ್ಯಕರ್ತರು ಸೇರಿದಂತೆ ಸರ್ಕಾರಿ ಮತ್ತು ಖಾಸಗಿ ವಲಯಗಳ ಆರೋಗ್ಯ ಕಾರ್ಯಕರ್ತರು ಈ ಹಂತದಲ್ಲಿ ಲಸಿಕೆ ಪಡೆಯುತ್ತಾರೆ.
ಲಸಿಕಾ ಕಾರ್ಯಕ್ರಮವು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಅಭಿವೃದ್ಧಿಪಡಿಸಿದ ಆನ್‌ಲೈನ್ ಡಿಜಿಟಲ್ ಪ್ಲಾಟ್‌ಫಾರ್ಮ್ ಕೋ-ವಿನ್ ಮೂಲಕ ನಡೆಯುತ್ತದೆ. ಇದು ಲಸಿಕೆಯ ದಾಸ್ತಾನುಗಳ ನೈಜ ಸಮಯದ ಮಾಹಿತಿ, ಶೇಖರಣಾ ತಾಪಮಾನ ಮತ್ತು ಕೋವಿಡ್-19 ಲಸಿಕೆ ಪಡೆಯುವ ಫಲಾನುಭವಿಗಳ ಟ್ರ್ಯಾಕಿಂಗ್ ಅನ್ನು ಸುಗಮಗೊಳಿಸುತ್ತದೆ. ಈ ಡಿಜಿಟಲ್ ಪ್ಲಾಟ್‌ಫಾರ್ಮ್, ಲಸಿಕೆ ನೀಡುವ ಎಲ್ಲಾ ಹಂತದ ಕಾರ್ಯಕ್ರಮ ವ್ಯವಸ್ಥಾಪಕರಿಗೆ ನೆರವಾಗುತ್ತದೆ.
ಕೋವಿಡ್-19 ಸಾಂಕ್ರಾಮಿಕ, ಲಸಿಕೆ ಮತ್ತು ಕೋ-ವಿನ್ ಸಾಫ್ಟ್‌ವೇರ್‌ಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಲು 24x7 ಸಹಾಯವಾಣಿ - 1075 ಅನ್ನು ಸ್ಥಾಪಿಸಲಾಗಿದೆ.
ನಾಗರಿಕ ವಿಮಾನಯಾನ ಸಚಿವಾಲಯದ ಸಕ್ರಿಯ ಬೆಂಬಲದೊಂದಿಗೆ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಲಸಿಕೆಗಳ ಸಾಕಷ್ಟು ಪ್ರಮಾಣಗಳನ್ನು ಈಗಾಗಲೇ ಎಲ್ಲಾ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಗೆ ತಲುಪಿಸಲಾಗಿದೆ. ಇವುಗಳನ್ನು ರಾಜ್ಯ / ಕೇಂದ್ರಾಡಳಿತ ಪ್ರದೇಶ ಸರ್ಕಾರಗಳು ಜಿಲ್ಲೆಗಳಿಗೆ ತಲುಪಿಸಿವೆ. ಜನರ ಭಾಗವಹಿಸುವಿಕೆ ತತ್ವದ ಆದಾರದ ಮೇಲೆ ಕಾರ್ಯಕ್ರಮವನ್ನು ಪ್ರಾರಂಭಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Year Ender 2025: Major Income Tax And GST Reforms Redefine India's Tax Landscape

Media Coverage

Year Ender 2025: Major Income Tax And GST Reforms Redefine India's Tax Landscape
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಡಿಸೆಂಬರ್ 2025
December 29, 2025

From Culture to Commerce: Appreciation for PM Modi’s Vision for a Globally Competitive India