ಗಣರಾಜ್ಯೋತ್ಸವದ ಮುನ್ನಾದಿನ ದೇಶದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ನೀಡಿದ ಪ್ರೇರಣಾದಾಯಕ ಭಾಷಣವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಶಂಸಿಸಿದ್ದಾರೆ.

ರಾಷ್ಟ್ರಪತಿಗಳು ಭಾರತದ ಸಂವಿಧಾನದ ವಿಶಿಷ್ಟತೆಯನ್ನು ಸೂಕ್ತವಾಗಿ ಉಲ್ಲೇಖಿದ್ದಾರೆ. ರಾಷ್ಟ್ರವನ್ನು ಮುನ್ನಡೆಸುತ್ತಿರುವ ಸಾಮೂಹಿಕ ಮನೋಭಾವವನ್ನು ಶ್ಲಾಘಿಸಿದ್ದಾರೆ. ಅವರ ಭಾಷಣವು ಪ್ರತಿಯೊಬ್ಬ ನಾಗರಿಕರು ಪ್ರಜಾಪ್ರಭುತ್ವವನ್ನು ಬಲಪಡಿಸಲು, ಸಾಂವಿಧಾನಿಕ ಆದರ್ಶಗಳನ್ನು ಎತ್ತಿಹಿಡಿಯಲು ಮತ್ತು ವಿಕಸಿತ ಭಾರತವನ್ನು ನಿರ್ಮಿಸಲು ತಮ್ಮ ಬದ್ಧತೆಯನ್ನು ಪುನರುಚ್ಚರಿಸಲು ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ;

“ಗಣರಾಜ್ಯೋತ್ಸವದ ಮುನ್ನಾದಿನ ರಾಷ್ಟ್ರಪತಿಯವರು ಅತ್ಯಂತ ಪ್ರೇರಣಾದಾಯಕ ಭಾಷಣವನ್ನು ನೀಡಿದರು. ಅವರು ನಮ್ಮ ಸಂವಿಧಾನದ ವೈಶಿಷ್ಟ್ಯತೆಯನ್ನು ಸರಿಯಾಗಿ ಉಲ್ಲೇಖಿಸಿದ್ದು, ನಮ್ಮ ರಾಷ್ಟ್ರವನ್ನು ಮುಂದಕ್ಕೆ ಕೊಂಡೊಯ್ದ ಸಮೂಹಾತ್ಮಕ ಮನೋಭಾವವನ್ನು ಮೆಚ್ಚಿಕೊಂಡಿದ್ದಾರೆ. ಅವರ ಭಾಷಣವು ಪ್ರಜಾಪ್ರಭುತ್ವವನ್ನು ಬಲಪಡಿಸಲು, ಸಂವಿಧಾನಾತ್ಮಕ ಆದರ್ಶಗಳನ್ನು ಕಾಪಾಡಲು ಮತ್ತು ವಿಕಸಿತ ಭಾರತವನ್ನು ನಿರ್ಮಿಸಲು ಪ್ರತಿಯೊಬ್ಬ ನಾಗರಿಕರೂ ತಮ್ಮ ಬದ್ಧತೆಯನ್ನು ಪುನಃ ದೃಢಪಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ.

@rashtrapatibhvn”

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
A Milestone in Financial Inclusion: The Success Story of PMSBY

Media Coverage

A Milestone in Financial Inclusion: The Success Story of PMSBY
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 9 ಮೇ 2026
May 09, 2026

Citizens Celebrate India’s Civilisational & Economic Awakening Under PM Narendra Modi