ಯುನೈಟೆಡ್ ಕಿಂಗ್‌ಡಮ್‌ನ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಭಾರತ-ಯುನೈಟೆಡ್ ಕಿಂಗ್‌ಡಮ್‌ನ ಮುಕ್ತ ವ್ಯಾಪಾರ ಒಪ್ಪಂದ ಮತ್ತು ಡಬಲ್ ಕೊಡುಗೆ ಸಮಾವೇಶದ ಯಶಸ್ವಿ ಮುಕ್ತಾಯದ ಬಗ್ಗೆ ಪ್ರಧಾನಮಂತ್ರಿ ಮೋದಿ ತೃಪ್ತಿ ವ್ಯಕ್ತಪಡಿಸಿದ್ದಾರೆ ಮತ್ತು ಈ ಮೈಲಿಗಲ್ಲಿಗೆ ಕಾರಣವಾದ ಉಭಯ ದೇಶಗಳ ರಚನಾತ್ಮಕ ಪಾಲುದಾರಿಕೆಯನ್ನು ಶ್ಲಾಘಿಸಿದ್ದಾರೆ.
ದ್ವಿಪಕ್ಷೀಯ ಸಂಬಂಧಗಳಲ್ಲಿ ಬೆಳೆಯುತ್ತಿರುವ ಆವೇಗವನ್ನು ಪ್ರಧಾನಮಂತ್ರಿ ಮೋದಿ ಸ್ವಾಗತಿಸಿದ್ದಾರೆ ಮತ್ತು ಭಾರತ-ಯುನೈಟೆಡ್ ಕಿಂಗ್ ಡಮ್ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಹೆಚ್ಚಾಗುತ್ತಿರುವ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ. ತಂತ್ರಜ್ಞಾನ ಭದ್ರತಾ ಉಪಕ್ರಮದ ಅಡಿಯಲ್ಲಿ ನಿರಂತರ ಸಹಯೋಗವನ್ನು ಅವರು ಸ್ವಾಗತಿಸಿದ್ದಾರೆ ಮತ್ತು ವಿಶ್ವಾಸಾರ್ಹ ಮತ್ತು ಸುರಕ್ಷಿತ ನಾವೀನ್ಯತೆ ಪರಿಸರ ವ್ಯವಸ್ಥೆಗಳನ್ನು ರೂಪಿಸುವ ಅದರ ಸಾಮರ್ಥ್ಯದ ಬಗ್ಗೆ ಗಮನ ಸೆಳೆದಿದ್ದಾರೆ.
ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಭದ್ರತೆ, ತಂತ್ರಜ್ಞಾನ, ನಾವೀನ್ಯತೆ ಮತ್ತು ಶುದ್ಧ ಇಂಧನ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವಲ್ಲಿ ಯುನೈಟೆಡ್ ಕಿಂಗ್ ಡಮ್ ಬಲವಾದ ಆಸಕ್ತಿಯನ್ನು ಡೇವಿಡ್ ಲ್ಯಾಮಿ ತಿಳಿಸಿದ್ದಾರೆ. ಮುಕ್ತ ವ್ಯಾಪಾರ ಒಪ್ಪಂದ (FTA) ಎರಡೂ ದೇಶಗಳಿಗೆ ಹೊಸ ಆರ್ಥಿಕ ಅವಕಾಶಗಳನ್ನು ತೆರೆಯುತ್ತದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಇಬ್ಬರೂ ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಯುನೈಟೆಡ್ ಕಿಂಗ್ ಡಮ್ ವಿದೇಶಾಂಗ ಕಾರ್ಯದರ್ಶಿ ಬಲವಾಗಿ ಖಂಡಿಸಿದರು ಮತ್ತು ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ಭಯೋತ್ಪಾದನೆ ಮತ್ತು ಅದನ್ನು ಬೆಂಬಲಿಸುವವರ ವಿರುದ್ಧ ನಿರ್ಣಾಯಕ ಅಂತಾರಾಷ್ಟ್ರೀಯ ಕ್ರಮದ ಅಗತ್ಯವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಒತ್ತಿ ಹೇಳಿದರು.
ಪ್ರಧಾನಮಂತ್ರಿಯವರು ಯುನೈಟೆಡ್ ಕಿಂಗ್ ಡಮ್ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್ ಅವರಿಗೆ ತಮ್ಮ ಆತ್ಮೀಯ ಶುಭಾಶಯಗಳನ್ನು ತಿಳಿಸಿದರು ಮತ್ತು ಸಾಧ್ಯವಾದಷ್ಟು ಬೇಗ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದರು.
Pleased to meet UK Foreign Secretary Mr. David Lammy. Appreciate his substantive contribution to the remarkable progress in our Comprehensive Strategic Partnership, further strengthened by the recently concluded FTA. Value UK’s support for India’s fight against cross-border… pic.twitter.com/8PDLWEwyTl
— Narendra Modi (@narendramodi) June 7, 2025


