ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಸತತ ಮೂರನೇ ಅವಧಿಗೆ ಭಾರತದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಪ್ರಧಾನಿ ಮತ್ತು ಅವರ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಪ್ರಮಾಣ ವಚನ ಬೋಧಿಸಿದರು.

 

ಈ ಕುರಿತು ಮೋದಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

"ಇಂದು ಸಂಜೆ ನಡೆದ ಸಮಾರಂಭದಲ್ಲಿ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದೆನು. 140 ಕೋಟಿ ಮಂದಿ ಭಾರತೀಯರಿಗೆ ಸೇವೆ ಸಲ್ಲಿಸಲು ಮತ್ತು ಭಾರತವನ್ನು ಪ್ರಗತಿಯ ಹೊಸ ಎತ್ತರಕ್ಕೆ ಕೊಂಡೊಯ್ಯಲು ಮಂತ್ರಿ ಮಂಡಲದ ಸಹೋದ್ಯೋಗಿಗಳ ಜೊತೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ.

 

ಇಂದು ನನ್ನ ಜೊತೆ ಪ್ರಮಾಣ ವಚನ ಸ್ವೀಕರಿಸಿದ ಎಲ್ಲರಿಗೂ ಅಭಿನಂದನೆಗಳು. ಈ ಸಚಿವರ ತಂಡವು ಹೊಸ ಯುವಕರು ಮತ್ತು ಅನುಭವ ಹೊಂದಿರುವವರ ಮಿಶ್ರಣವಾಗಿದೆ. ನಮ್ಮ ತಂಡವು ದೇಶದ ಜನರ ಜೀವನವನ್ನು ಸುಧಾರಿಸುವಲ್ಲಿ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತದೆ.

ಪ್ರಮಾಣ ವಚನ ಸಮಾರಂಭಕ್ಕೆ ಆಗಮಿಸಿದ ಎಲ್ಲ ವಿದೇಶಿ ಗಣ್ಯರಿಗೆ ನಾನು ಕೃತಜ್ಞನಾಗಿದ್ದೇನೆ. ಮಾನವ ಪ್ರಗತಿಯ ಅನ್ವೇಷಣೆಯಲ್ಲಿ ಭಾರತ ಯಾವಾಗಲೂ ನಮ್ಮ ಮೌಲ್ಯಯುತ ಪಾಲುದಾರರೊಂದಿಗೆ ನಿಕಟವಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ'' ಎಂದು ಬರೆದುಕೊಂಡಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Vande Bharat AC chair car fares much lower than those in China, Japan, France: Railway Minister Ashwini Vaishnaw

Media Coverage

Vande Bharat AC chair car fares much lower than those in China, Japan, France: Railway Minister Ashwini Vaishnaw
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 12 ಫೆಬ್ರವರಿ 2026
February 12, 2026

Sustainable, Strong, and Global: India's 2026 Surge Under PM Modi's Transformative Leadership