ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉಕ್ರೇನ್ ನ ಅಧ್ಯಕ್ಷ ಘನತೆವೆತ್ತ ವೊಲೋಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಇಂದು ಸಂಭಾಷಣೆ ನಡೆಸಿದರು.
ಅಧ್ಯಕ್ಷ ಝೆಲೆನ್ಸ್ಕಿ ಅವರು ಪ್ರಧಾನಮಂತ್ರಿಯವರಿಗೆ ಉಕ್ರೇನ್ ನಲ್ಲಿ ಉದ್ಭವಿಸಿರುವ ಸಂಘರ್ಷದ ಸ್ಥಿತಿಯ ಬಗ್ಗೆ ವಿವರವಾಗಿ ತಿಳಿಸಿದರು. ಪ್ರಸಕ್ತ ನಡೆಯುತ್ತಿರುವ ಸಂಘರ್ಷದಿಂದಾಗಿ ಆಗಿರುವ ಆಸ್ತಿ ಹಾನಿ ಮತ್ತು ಜೀವಹಾನಿಯ ಬಗ್ಗೆ ಪ್ರಧಾನಮಂತ್ರಿಯವರು ತಮ್ಮ ತೀವ್ರ ನೋವು ವ್ಯಕ್ತಪಡಿಸಿದರು. ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸಲು ಮತ್ತು ಮಾತುಕತೆಗೆ ಮರಳಲು ಅವರು ತಮ್ಮ ಕರೆಯನ್ನು ಪುನರುಚ್ಚರಿಸಿದರು ಮತ್ತು ಶಾಂತಿ ಪ್ರಯತ್ನಗಳಿಗೆ ಯಾವುದೇ ರೀತಿಯ ಕೊಡುಗೆ ನೀಡುವ ಭಾರತದ ಬಯಕೆಯನ್ನು ವ್ಯಕ್ತಪಡಿಸಿದರು.
ಉಕ್ರೇನ್ ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಭಾರತದ ಕಾಳಜಿಯನ್ನು ಪ್ರಧಾನಮಂತ್ರಿ ವ್ಯಕ್ತಪಡಿಸಿದರು. ಭಾರತೀಯ ನಾಗರಿಕರನ್ನು ತ್ವರಿತವಾಗಿ ಮತ್ತು ಸುರಕ್ಷಿತವಾಗಿ ಸ್ಥಳಾಂತರಿಸಲು ಉಕ್ರೇನಿನ ಅಧಿಕಾರಿಗಳು ಅನುವು ಮಾಡಿಕೊಡಬೇಕೆಂದು ಕೋರಿದರು.


