ಮಾನ್ಯರೇ,
ನಿಮ್ಮ ಆತ್ಮೀಯ ಸ್ವಾಗತಕ್ಕೆ ನನ್ನ ಹೃತ್ಪೂರ್ವಕ ವಂದನೆಗಳು. ಕಜಾನ್ ನಲ್ಲಿ ಕಳೆದ ವರ್ಷ ನಾವು ನಡೆಸಿದ ಅರ್ಥಪೂರ್ಣ ಚರ್ಚೆಯು ನಮ್ಮ ಸಂಬಂಧಗಳಿಗೆ ಸಕಾರಾತ್ಮಕ ದಿಶೆಯನ್ನು ನೀಡಿದೆ. ಗಡಿಯಲ್ಲಿ ಯುದ್ಧದ ಸನ್ನಿವೇಶದಿಂದ ಹಿಂದಕ್ಕೆ ಸರಿದ ನಂತರ ಶಾಂತಿ ಮತ್ತು ಸ್ಥಿರತೆಯ ವಾತಾವರಣ ನೆಲೆಸಿದೆ. ನಮ್ಮ ವಿಶೇಷ ಪ್ರತಿನಿಧಿಗಳು ಗಡಿ ನಿರ್ವಹಣೆಯ ಕುರಿತು ಒಮ್ಮತದ ತಿಳುವಳಿಕೆ ಹೊಂದಿದ್ದಾರೆ. ಕೈಲಾಸ ಮಾನಸ ಸರೋವರ ಯಾತ್ರೆಯು ಪುನರಾರಂಭಗೊಂಡಿದೆ ಮತ್ತು ಎರಡೂ ದೇಶಗಳ ನಡುವೆ ನೇರ ವಿಮಾನ ಸೇವೆಯನ್ನೂ ಸಹ ಪ್ರಾರಂಭಿಸಲಾಗುತ್ತಿದೆ. ನಮ್ಮ ನಡುವಿನ ಸಹಕಾರವು ನಮ್ಮ ಎರಡೂ ರಾಷ್ಟ್ರಗಳ 2.8 ಶತಕೋಟಿ ಜನರ ಹಿತಾಸಕ್ತಿಗಳಿಗೆ ಸಂಬಂಧಿಸಿದೆ. ಇದು ಎಲ್ಲಾ ಮಾನವೀಯ ಕಲ್ಯಾಣಕ್ಕೂ ದಾರಿ ಮಾಡಿಕೊಡಲಿದೆ. ಪರಸ್ಪರ ನಂಬಿಕೆ, ಗೌರವ ಮತ್ತು ಸೂಕ್ಷ್ಮ ಭಾವನಾತ್ಮಕತೆಯ ಆಧಾರದ ಮೇಲೆ ನಮ್ಮ ಸಂಬಂಧಗಳನ್ನು ಇನ್ನಷ್ಟು ಬಲಪಡಿಸಲು ನಾವು ಬದ್ಧರಾಗಿದ್ದೇವೆ.
ಮಾನ್ಯರೇ,
ಶಾಂಘೈ ಸಹಕಾರ ಸಂಘಟನೆ (SCO) ಶೃಂಗಸಭೆಯಲ್ಲಿ ಚೀನಾದ ಯಶಸ್ವಿ ಅಧ್ಯಕ್ಷತೆಗಾಗಿ ನಿಮಗೆ ಮನದಾಳದ ಅಭಿನಂದನೆಗಳು. ಚೀನಾಗೆ ಭೇಟಿ ನೀಡಲು ಮತ್ತು ಇಂದಿನ ಸಭೆಗೆ ಆಹ್ವಾನ ನೀಡಿದ್ದಕ್ಕಾಗಿ ಮತ್ತೊಮ್ಮೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳು.


