ನವದೆಹಲಿಯಲ್ಲಿ “ಕರ್ಮಯೋಗಿ ಭವನ” ದ I ನೇ ಹಂತದ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿಯವರು ನೆರವೇರಿಸಲಿದ್ದಾರೆ
ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್‌ಗಾರ್ ಮೇಳವು ಒಂದು ಪ್ರಮುಖ ಹೆಜ್ಜೆಯಾಗಿದೆ
ಹೊಸದಾಗಿ ನೇಮಕಗೊಂಡವರು ಆನ್‌ಲೈನ್ ಮಾಡ್ಯೂಲ್ ಕರ್ಮಯೋಗಿ ಪ್ರಾರಂಭ್ ಮೂಲಕ ತರಬೇತಿ ಪಡೆಯಲಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 12 ಫೆಬ್ರವರಿ 2024 ರಂದು 10:30 AM ಕ್ಕೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹೊಸದಾಗಿ ಸೇರ್ಪಡೆಗೊಂಡವರಿಗೆ 1 ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.

ಈ ಸಂದರ್ಭದಲ್ಲಿ, ಪ್ರಧಾನಮಂತ್ರಿಯವರು ಹೊಸದಿಲ್ಲಿಯಲ್ಲಿ ಇಂಟಿಗ್ರೇಟೆಡ್ ಕಾಂಪ್ಲೆಕ್ಸ್ "ಕರ್ಮಯೋಗಿ ಭವನ" ದ ಹಂತಕ್ಕೆ ಅಡಿಗಲ್ಲು ಹಾಕಲಿದ್ದಾರೆ. ಈ ಸಂಕೀರ್ಣವು ಮಿಷನ್ ಕರ್ಮಯೋಗಿಯ ವಿವಿಧ ಸಹಯೋಗ ಉತ್ತೇಜಿಸುತ್ತದೆ.

ದೇಶಾದ್ಯಂತ 47 ಸ್ಥಳಗಳಲ್ಲಿ ರೋಜ್‌ಗಾರ್ ಮೇಳ ನಡೆಯಲಿದೆ. ಈ ಉಪಕ್ರಮವನ್ನು ಬೆಂಬಲಿಸುವ ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ರಾಜ್ಯ ಸರ್ಕಾರಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇಮಕಾತಿಗಳು ನಡೆಯುತ್ತಿವೆ. ಹೊಸ ನೇಮಕಾತಿಗಳು ವಿವಿಧ ಸಚಿವಾಲಯಗಳು/ಇಲಾಖೆಗಳಲ್ಲಿ ಅವಕಾಶ ಒದಗಿಸಲಿವೆ. ಕಂದಾಯ ಇಲಾಖೆ, ಗೃಹ ಸಚಿವಾಲಯ, ಉನ್ನತ ಶಿಕ್ಷಣ ಇಲಾಖೆ, ಪರಮಾಣು ಶಕ್ತಿ ಇಲಾಖೆ, ರಕ್ಷಣಾ ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಬುಡಕಟ್ಟು ವ್ಯವಹಾರಗಳ ಸಚಿವಾಲಯ ಮತ್ತು ರೈಲ್ವೆ ಸಚಿವಾಲಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ವಿವಿಧ ಹುದ್ದೆಗಳಿವೆ.

ರೋಜ್‌ಗಾರ್ ಮೇಳವು ದೇಶದಲ್ಲಿ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯ ಈಡೇರಿಕೆಗೆ ಒಂದು ಹೆಜ್ಜೆಯಾಗಿದೆ. ರೋಜ್‌ಗಾರ್ ಮೇಳವು ಮತ್ತಷ್ಟು ಉದ್ಯೋಗ ಸೃಷ್ಟಿಯನ್ನು ತರುತ್ತದೆ ಮತ್ತು ಯುವಜನರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ನೇರ ಭಾಗವಹಿಸುವಿಕೆಗಾಗಿ ಲಾಭದಾಯಕ ಅವಕಾಶಗಳನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.

ಹೊಸದಾಗಿ ಸೇರ್ಪಡೆಗೊಂಡವರು ಕರ್ಮಯೋಗಿ ಪ್ರಾರಂಭ್ ಮೂಲಕ ತರಬೇತಿ ಪಡೆಯುವ ಅವಕಾಶವನ್ನು ಪಡೆಯುತ್ತಿದ್ದಾರೆ, iGOT ಕರ್ಮಯೋಗಿ ಪೋರ್ಟಲ್‌ನಲ್ಲಿ ಆನ್‌ಲೈನ್ ಮಾಡ್ಯೂಲ್ ನಲ್ಲಿ 880 ಕ್ಕೂ ಹೆಚ್ಚು ಇ-ಲರ್ನಿಂಗ್ ಕೋರ್ಸ್‌ ದೊರೆಯಲಿವೆ. 'ಎಲ್ಲಿಯಾದರೂ ಯಾವುದೇ ಸಾಧನ' ಕಲಿಕಾ ಸ್ವರೂಪಕ್ಕಾಗಿ ಇವುಗಳನ್ನು ಲಭ್ಯಗೊಳಿಸಲಾಗಿದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s Budget Driving AI, Semiconductors and IT Growth

Media Coverage

India’s Budget Driving AI, Semiconductors and IT Growth
NM on the go

Nm on the go

Always be the first to hear from the PM. Get the App Now!
...
Prime Minister speaks with the King of Jordan
March 02, 2026

Prime Minister Narendra Modi spoke with His Majesty King Abdullah II, the King of Jordan.

The Prime Minister conveyed deep concern at the evolving situation in the region. He reaffirmed support for the peace, security, and well-being of the people of Jordan.

The Prime Minister also thanked His Majesty for taking care of the Indian community in Jordan in this difficult hour.

The Prime Minister shared on X;

"Spoke with His Majesty King Abdullah II, the King of Jordan. Conveyed our deep concern at the evolving situation in the region. We reaffirm our support for peace, security and the well-being of the people of Jordan. I thanked him for taking care of the Indian community in Jordan in this difficult hour."