ನೂತನ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್‌ ಗಾರ್ ಮೇಳವು ಒಂದು ಪ್ರಮುಖ ಹೆಜ್ಜೆಯಾಗಿದೆ
ಹೊಸದಾಗಿ ನೇಮಕಗೊಂಡವರು ಆನ್‌ಲೈನ್ ಮಾಡ್ಯೂಲ್ ಕರ್ಮಯೋಗಿ ಪ್ರಾರಂಭ್ ಮೂಲಕ ತರಬೇತಿ ಪಡೆಯಲಿದ್ದಾರೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 28ನೇ ಅಕ್ಟೋಬರ್, 2023 ರಂದು ಮಧ್ಯಾಹ್ನ 1 ಗಂಟೆಗೆ ವಿಡಿಯೊ ಸಮಾವೇಶ ಮೂಲಕ ಹೊಸದಾಗಿ ಸೇರ್ಪಡೆಗೊಂಡ 51,000 ಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.  ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ನೇಮಕಗೊಂಡವರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.


ದೇಶಾದ್ಯಂತ 37 ಸ್ಥಳಗಳಲ್ಲಿ ಉದ್ಯೋಗ(ರೋಜ್‌ ಗಾರ್ ) ಮೇಳ ನಡೆಯಲಿದೆ.  ಈ ಉಪಕ್ರಮವನ್ನು ಬೆಂಬಲಿಸುವ ಕೇಂದ್ರ ಸರ್ಕಾರದ ಇಲಾಖೆಗಳು ಹಾಗೂ ರಾಜ್ಯ ಸರ್ಕಾರಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇಮಕಾತಿ ಪ್ರಕ್ರಿಯೆಗಳು ನಡೆಯುತ್ತಿವೆ.  ದೇಶದಾದ್ಯಂತ ರೈಲ್ವೆ ಸಚಿವಾಲಯ, ಅಂಚೆ ಇಲಾಖೆ, ಗೃಹ ಸಚಿವಾಲಯ, ಕಂದಾಯ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಇತರರಲ್ಲಿ ಮತ್ತು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯ ಸೇರಿದಂತೆ ವಿವಿಧ ಸಚಿವಾಲಯಗಳು / ಇಲಾಖೆಗಳಲ್ಲಿ ಆಯ್ಕೆಯಾದ ಮಂದಿ ಹೊಸ ನೇಮಕಾತಿಗಳ ಮೂಲಕ ವಿವಿಧ ಸರ್ಕಾರಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.


ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್‌ ಗಾರ್ ಮೇಳವು ಒಂದು ಹೆಜ್ಜೆಯಾಗಿದೆ.  ರೋಜ್‌ ಗಾರ್ ಮೇಳವು ಮತ್ತಷ್ಟು ಉದ್ಯೋಗ ಸೃಷ್ಟಿಯಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಯುವಜನರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಭಾಗವಹಿಸಲು ಅವರಿಗೆ ಅರ್ಥಪೂರ್ಣ ಅವಕಾಶಗಳನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.


ಹೊಸದಾಗಿ ಸೇರ್ಪಡೆಗೊಂಡವರು ಐ.ಜಿ.ಓ.ಟಿ. ಕರ್ಮಯೋಗಿ ಜಾಲತಾಣದಲ್ಲಿ ಆನ್‌ಲೈನ್ ಮಾಡ್ಯೂಲ್ ಆಗಿರುವ ಕರ್ಮಯೋಗಿ ಪ್ರಾರಂಭ್ ಪಠ್ಯ ಅಭ್ಯಾಸ ಕ್ರಮ ಮೂಲಕ ತರಬೇತಿ ಪಡೆಯುವ ಅವಕಾಶವನ್ನು ಪಡೆಯಲಿದ್ದಾರೆ, ಅಲ್ಲಿ 750 ಕ್ಕೂ ಹೆಚ್ಚು ಇ-ಲರ್ನಿಂಗ್ ಕೋರ್ಸ್‌ಗಳನ್ನು 'ಎಲ್ಲಿಯಾದರೂ ಯಾವುದೇ ಸಾಧನ' ಕಲಿಕೆಯ ಸ್ವರೂಪದೊಂದಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡಲಾಗಿದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
One App For 2,400-Plus Government Services: How UMANG Is Changing Access In India

Media Coverage

One App For 2,400-Plus Government Services: How UMANG Is Changing Access In India
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 27 ಮಾರ್ಚ್ 2026
March 27, 2026

Relief, Revival & Rise: How PM Modi is Building a Modern, Rooted & Self-Reliant India