ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಐ ಇಂಪ್ಯಾಕ್ಟ್ ಶೃಂಗಸಭೆಯ ನೇಪಥ್ಯದಲ್ಲಿಂದು ಕ್ರೊಯೇಷಿಯಾದ ಪ್ರಧಾನಿ ಮಾನ್ಯ ಆಂಡ್ರೆಜ್ ಪ್ಲೆಂಕೋವಿಕ್ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಶ್ರೀ ಆಂಡ್ರೆಜ್ ಪ್ಲೆಂಕೋವಿಕ್ ಅವರು ಫೆಬ್ರವರಿ 18 ರಿಂದ 21 ರವರೆಗೆ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಭೇಟಿ ನೀಡಿದ್ದು, ಕ್ರೊಯೇಷಿಯಾದ ಪ್ರಧಾನಿಯೊಬ್ಬರು ಭಾರತಕ್ಕೆ ಭೇಟಿ ನೀಡಿರುವುದು ಇದೇ ಮೊದಲಾಗಿದೆ. ವ್ಯಾಪಾರ ಮತ್ತು ಹೂಡಿಕೆ, ವಿಜ್ಞಾನ ಮತ್ತು ತಂತ್ರಜ್ಞಾನ, ಸಂಪರ್ಕ, ಸಾಂಸ್ಕೃತಿಕ ವಿನಿಮಯ, ಜನರ ನಡುವಿನ ಬಾಂಧವ್ಯ ಸೇರಿದಂತೆ ವ್ಯಾಪಕ ಶ್ರೇಣಿಯ ವಲಯಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವ ಮಾರ್ಗಗಳ ಕುರಿತು ಇಬ್ಬರೂ ನಾಯಕರು ಚರ್ಚಿಸಿದರು. ಐತಿಹಾಸಿಕ ಭಾರತ-ಇಯು ಮುಕ್ತ ವ್ಯಾಪಾರ ಒಪ್ಪಂದದ ತೀರ್ಮಾನವನ್ನು ಪ್ರಸ್ತಾಪಿಸಿದ ಅವರು, ದ್ವಿಪಕ್ಷೀಯ ವ್ಯಾಪಾರ ಉತ್ತೇಜಿಸಲು ಒಪ್ಪಂದದ ತ್ವರಿತ ಅನುಷ್ಠಾನಕ್ಕೆ ಮನವಿ ಮಾಡಿದರು. ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆಯೂ ಉಭಯರು ಅಭಿಪ್ರಾಯ ವಿನಿಮಯ ಮಾಡಿಕೊಂಡರು.

ಎರಡೂ ದೇಶಗಳ ಜನರ ಉಜ್ವಲ ಭವಿಷ್ಯಕ್ಕಾಗಿ ಸಜ್ಜಾಗಲು ಕೃತಕ ಬುದ್ಧಿಮತ್ತೆ ಮತ್ತು ಉದಯೋನ್ಮುಖ ತಂತ್ರಜ್ಞಾನಗಳನ್ನು ಬಳಸಿಕೊಳ್ಳಲು ಎರಡೂ ದೇಶಗಳು ಒತ್ತು ನೀಡಿವೆ.

ಭಾರತದ ಯೋಗ ಮತ್ತು ಆಯುರ್ವೇದ ಯೋಗಕ್ಷೇಮ ಪದ್ಧತಿಯ ಬಗ್ಗೆ ಕ್ರೊಯೇಷಿಯಾದ ಆಸಕ್ತಿ ಮತ್ತು ನಂಬಿಕೆಯನ್ನು ಪ್ರಧಾನಮಂತ್ರಿ ಮೋದಿ ಅವರು ಬಹುವಾಗಿ ಶ್ಲಾಘಿಸಿದ್ದಾರೆ.

ಪ್ರಧಾನಮಂತ್ರಿ ಮೋದಿ ಅವರು ಜೂನ್ 2025ರಲ್ಲಿ ಕ್ರೊಯೇಷಿಯಾಕ್ಕೆ ಐತಿಹಾಸಿಕ ಭೇಟಿ ನೀಡಿದ್ದರು, ಇದು ಭಾರತದ ಪ್ರಧಾನಮಂತ್ರಿಯೊಬ್ಬರು ಆ ದೇಶಕ್ಕೆ ನೀಡಿದ ಮೊದಲ ಭೇಟಿಯಾಗಿತ್ತು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Khichdi To Moringa Paratha: 7 Traditional Foods PM Modi Loves

Media Coverage

Khichdi To Moringa Paratha: 7 Traditional Foods PM Modi Loves
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 26 ಆಗಸ್ಟ್ 2026
August 26, 2026

Accountability Meets Ambition: Record Low NPAs, Record Defence Output, Record Digital Adoption Under the Leadership of PM Modi